Breaking News

ಸ್ವಾತಂತ್ರ್ಯೋತ್ಸವದಲ್ಲಿ ಅಂಗಾಂಗ ದಾನಿಗಳ 64 ಕುಟುಂಬಗಳವರಿಗೆ ಪ್ರಶಂಸಾ ಪತ್ರ

Spread the love

ಬೆಂಗಳೂರು,ಆ.13- ಮಾಣಿಕ್‌ ಷಾ ಪೆರೇಡ್‌ ಮೈದಾನದಲ್ಲಿ ಈ ಬಾರಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಅಂಗಾಂಗ ದಾನ ಮಾಡಿರುವ 64 ಕುಟುಂಬಗಳ ಸದಸ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಂಸಾ ಪತ್ರ ನೀಡಿ ಗೌರವಿಸಲಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಇಂದಿಲ್ಲಿ ತಿಳಿಸಿದರು.

 

ಸ್ವಾತಂತ್ರ್ಯ ದಿನಾಚರಣೆ ಕುರಿತಂತೆ ಹಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಬಾರಿ ವಿಶೇಷವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಸ್ಥಾಪಿತವಾದ ಸ್ಟೇಟ್‌ ಆರ್ಗನ್‌ ಟಿಶ್ಯೂ ಟ್ರಾನ್ಸ್ ಸಪ್ಲಾಂಟ್‌ ಆರ್ಗನೈಸೇಷನ್‌ ಮಾಹಿತಿಯನ್ನಾಧರಿಸಿ ಅಂಗಾಂಗ ದಾನ ಮಾಡಿರುವ 64 ಕುಟುಂಬಗಳ ಸದಸ್ಯರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಗುತ್ತಿದೆ ಎಂದು ವಿವರಿಸಿದರು.

ಸ್ವಾತಂತ್ರ್ಯ ದಿನೋತ್ಸವದಂದು ಬೆಳಿಗ್ಗೆ 8.58 ಕ್ಕೆ ಮುಖ್ಯಮಂತ್ರಿಗಳು ಪೆರೇಡ್‌ ಮೈದಾನಕ್ಕೆ ಆಗಮಿಸಲಿದ್ದು, 9 ಗಂಟೆಗೆ ಸರಿಯಾಗಿ ಧ್ವಜಾರೋಹಣ ನೆರವೇರಿಸಲಿದ್ದಾರೆ.ಧ್ವಜಾರೋಹಣದ ನಂತರ ಮುಖ್ಯಮಂತ್ರಿಗಳು ತೆರೆದ ಜೀಪ್‌ನಲ್ಲಿ ಪೆರೇಡ್‌ ವೀಕ್ಷಣೆ ಮಾಡಿ ಗೌರವ ರಕ್ಷೆ ಸ್ವೀಕರಿಸಿದ ನಂತರ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದಾರೆ ಎಂದು ತುಷಾರ್‌ ಗಿರಿನಾಥ್‌ ಹೇಳಿದರು.

ಸಿಎಂ ಗೌರವ ರಕ್ಷೆ ಸ್ವೀಕರಿಸುವ ತಾಲೀಮನ್ನು ಆ.11 ರಿಂದ ನಡೆಸಿಕೊಂಡು ಬರಲಾಗುತ್ತಿದೆ. ಗೌರವ ರಕ್ಷೆ ಕಾರ್ಯದಲ್ಲಿ ಕೆಎಸ್‌‍ಆರ್‌ಪಿ, ಸಿಆರ್‌ಪಿಎಫ್‌, ಬಿಎಸ್‌‍ಎಫ್‌, ಸಿಎಆರ್‌, ಗೋವಾ ಪೊಲೀಸ್‌‍, ಕೆಎಸ್‌‍ಐಎಸ್‌‍ಎಫ್‌, ಟ್ರಾಫಿಕ್‌, ಮಹಿಳಾ ಪೊಲೀಸರು, ಹೋಂಗಾರ್ಡ್‌್ಸ, ಅಗ್ನಿಶಾಮಕ ದಳ, ಡಾಗ್‌ ಸ್ಕ್ವಾಡ್‌ ಮತ್ತು ಬ್ಯಾಂಡ್‌ನ 35 ತುಕಡಿಗಳಲ್ಲಿ 1150 ಮಂದಿ ಭಾಗವಹಿಸುತ್ತಿದ್ದಾರೆ ಎಂದು ಅವರು ಹೇಳಿದರು.

ನಾಡಗೀತೆ ಮತ್ತು ರೈತಗೀತೆಯನ್ನು ಮಂಜುನಾಥ್‌, ಸಿದ್ದರಾಜಯ್ಯ ಹಾಗೂ ಸಬ್ಬನಹಳ್ಳಿ ರಾಜು ಮತ್ತು ತಂಡದವರು ನಡೆಸಿಕೊಡಲಿದ್ದಾರೆ.ಯಲಹಂಕ ಸರ್ಕಾರಿ ಪದವಿ ಪೂರ್ವ ಕಾಲೇಜಿನ 750 ವಿದ್ಯಾರ್ಥಿಗಳು ಜಯಭಾರತಿ ಹಾಡು ಹಾಡಲಿದ್ದಾರೆ.ರಾಷ್ಟ್ರೀಯ ಸೇವಾ ಯೋಜನೆ, ಎನ್‌ಎಸ್‌‍ಎಸ್‌‍, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 400 ಮಕ್ಕಳು ಸರ್ಕಾರದ 5 ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ಕುರಿತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ