ಬೈಲಹೊಂಗಲ: ಸಮೀಪದ ಬೆನಕಟ್ಟಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಶನಿವಾರ ನಡೆದಿದೆ.
ಸವದತ್ತಿ ತಾಲೂಕಿನ ಬೆನಕಟ್ಟಿ ಗ್ರಾಮದ ಕಾಡಪ್ಪ ರುದ್ರಪ್ಪ ಶಿರಸಂಗಿ(42) ಕೊಲೆಯಾದ ವ್ಯಕ್ತಿ.
ಮಬನೂರ ಗ್ರಾಮದ ಲಕ್ಷ್ಮಣ ದೇವೇಂದ್ರಪ್ಪ ಹೂಲಿ(21), ಜೀವಾಪುರ ಗ್ರಾಮದ ಸತೀಶ ಯಮನಪ್ಪ ಅರಿಬೆಚ್ಚಿ(28) ಬಂಧಿತ ಆರೋಪಿಗಳು.
ಮುರಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
Laxmi News 24×7