Breaking News

ಯತ್ನಾಳ್, ಜಾರಕಿಹೊಳಿ ಪಾದಯಾತ್ರೆ ಮಾಡಲಿ, ಆದರೆ, ಹೈಕಮಾಂಡ್ ಅನುಮತಿ ಪಡೆಯಲಿ: BYV

Spread the love

ಬೆಂಗಳೂರು: ‘ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಕೆಲವು ಶಾಸಕರು ಸೇರಿ ಉತ್ತರ ಕರ್ನಾಟಕದ ಭಾಗದಲ್ಲಿ ಪಾದಯಾತ್ರೆ ನಡೆಸುವ ಬಗ್ಗೆ ನಮ್ಮ ತಕರಾರು ಇಲ್ಲ. ಆದರೆ, ಅವರು ವರಿಷ್ಠರ ಅನುಮತಿ ಪಡೆದುಕೊಂಡು ಮಾಡಲಿ’ ಎಂದು ಬಿಜೆಪಿ ರಾಜ್ಯ ಘಟಕದ ಆಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

 

ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಸಂತನಗರದಲ್ಲಿ ಹರ್‌ ಘರ್‌ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಈ ವಿಷಯ ತಿಳಿಸಿದರು.

ಪಕ್ಷದ ಅಧ್ಯಕ್ಷನಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತಿದ್ದೇನೆ. ಉತ್ತರಕರ್ನಾಟಕದಲ್ಲಿ ಪಾದಯಾತ್ರೆ ಮಾಡುವುದಕ್ಕೆ ಕೆಲವು ಶಾಸಕರು ನಿರ್ಧಾರ ಮಾಡಿಕೊಂಡಿದ್ದಾರೆ. ಇದಕ್ಕೆ ನನ್ನ ಅಭ್ಯಂತರವಿಲ್ಲ. ಅವರ ಪಾದಯಾತ್ರೆಯಿಂದ ಪಕ್ಷದ ಸಂಘಟನೆ ಪೂರಕವಾಗಿರಬೇಕು. ಅದಕ್ಕಿಂತ ಮುಖ್ಯವಾಗಿ ವರಿಷ್ಠರ ಅನುಮತಿ ಪಡೆದುಕೊಳ್ಳಬೇಕು ಎಂದು ಹೇಳಿದರು.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ