Breaking News

ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ವ್ಯಕ್ತಿ ಸಾವು

Spread the love

ಪಾವಗಡ: ಆಂಧ್ರಪ್ರದೇಶದ ರೊದ್ದಂ ನಿಂದ ಕರ್ನಾಟಕದ ಕೊಡುಮಡುಗು ಗ್ರಾಮದ ಕಡೆಗೆ ಬರುತ್ತಿದ್ದ ಬೈಕ್ ಮತ್ತು ಕೊಡಮಡುಗು ಗ್ರಾಮದಿಂದ ಆಂಧ್ರ ಕಡೆ ಹೋಗುತ್ತಿದ್ದ ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಆ.14ರ ಬುಧವಾರ ನಡೆದಿದೆ.

ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ವ್ಯಕ್ತಿ ಸಾವು, ಇಬ್ಬರಿಗೆ ಗಂಭೀರ ಗಾಯ

ಆಂಧ್ರಪ್ರದೇಶದ ಪೆದ್ದಗುವ್ವಲಪಲ್ಲಿ ಗ್ರಾಮದ ರಾಮಾಂಜನೇಯಲು (56) ಮೃತಪಟ್ಟ ವ್ಯಕ್ತಿ.

ಆ.14ರ ಬುಧವಾರ ಮಧ್ಯಾಹ್ನ ಸುಮಾರು 1 ಗಂಟೆಯ ಸಂದರ್ಭದಲ್ಲಿ ಪಾವಗಡ ತಾಲೂಕಿನ ಕೊಡುಮಡುಗು ಗ್ರಾಮದ ಹೊರವಲಯದ ಬೈರಪುರದ ಗೇಟ್ ಬಳಿ ಆಂಧ್ರ ಮತ್ತು ಕರ್ನಾಟಕ ಗಡಿ ರೇಖೆಯ ಸಮೀಪ ಈ ಘಟನೆ ನಡಿದಿದೆ.

ಇದೇ ಅಪಘಾತದಲ್ಲಿ ಮೃತಪಟ್ಟಿರುವ ರಾಮಾಂಜನೇಯಲು ಎಂಬವರ ಪುತ್ರ ಕೋಟೇಶ್ವರಲು ಅವರಿಗೂ ಸಹ ಗಂಭೀರ ಗಾಯಗಳಾಗಿದ್ದು, ಅದೇ ರೀತಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಪಾತ್ರಪಲ್ಲಿ ಮದ್ಲೇಟಪ್ಪ ಅವರ ಕಾಲು ಮುರಿದು ಗಂಭೀರ ಗಾಯಗಳಾಗಿವೆ. ಗಾಯಗಳಾದ ಇಬ್ಬರನ್ನೂ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ