ಬೆಂಗಳೂರು: ಮೊದಲು 105 ಶಾಸಕರು. ನಂತರ ಕಾಂಗ್ರೆಸ್, ಜೆಡಿಎಸ್‍ನಿಂದ ಬೇಸತ್ತು 17 ಜನ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನನ್ನಿಂದಲೇ ಸರ್ಕಾರ ಬಂದಿದೆ ಅಂತಾ ಯಾರು ಹೇಳ್ತಾರೋ ಅವರು ಇದನ್ನ ಅರ್ಥ ಮಾಡಿಕೊಳ್ಳಬೇಕು ಎಂದು ಬಿಜೆಪಿಗೆ ಸೇರ್ಪಡೆಯಾಗಿ ಸರಕಾರ ರಚನೆಗೆ ಕಾರಣವಾಗಿದ್ದ ರಮೇಶ್ ಜಾರಕಿಹೊಳಿ ಸೇರಿದಂತೆ ಇತರ ಶಾಸಕರ ವಿರುದ್ಧ ವಿಧಾನಸೌಧದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ಹದಿನೇಳು ಜನರಿಂದ ಬಿಜೆಪಿ ಸರ್ಕಾರ ಬಂದಿದೆ ಎಂಬುದು ಸುಳ್ಳು. ಪಕ್ಷದ ಕಾರ್ಯಕರ್ತರ ಶ್ರಮದಿಂದ ರಾಜ್ಯದಲ್ಲಿ ಸರ್ಕಾರ ಬಂದಿದೆ ಎಂದು ವಿಧಾನಸೌಧದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.
105 ಶಾಸಕರು ಇಲ್ಲದೇ ಇದ್ದಿದ್ರೆ ಸರ್ಕಾರ ಹೇಗೆ ಆಗುತ್ತಿತ್ತು? ಪಕ್ಷದ ಕಾರ್ಯಕರ್ತರ ತಪಸ್ಸಿನಿಂದಾಗಿ 105 ಶಾಸಕರು ಗೆದ್ದಿದ್ದರು. ಮೊದಲು 105 ಶಾಸಕರು, ಆಮೇಲೆ ಉಳಿದವರು. ಯಾರೋ ಒಬ್ಬರಿಂದ ಸರ್ಕಾರ ಬಂದಿದೆ ಎಂದು ಹೇಳಲಾಗದು. ಲಕ್ಷಾಂತರ ಕಾರ್ಯಕರ್ತರ ಶ್ರಮದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದರು.
ಸಚಿವ ಸಂಪುಟದ ಬಗ್ಗೆ ಮಾಹಿತಿ ಇಲ್ಲ. ಸಿಎಂ ವರಿಷ್ಠರ ಜೊತೆ ಚರ್ಚೆ ಮಾಡಿ ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ. ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ಕೊಟ್ಟರೆ ತಪ್ಪೇನು ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಮಾತನಾಡಿ, ಅದು ಅವರ ವೈಯಕ್ತಿಕ ಅಭಿಪ್ರಾಯ. ಅಂತಿಮವಾಗಿ ಪಕ್ಷದ ತೀರ್ಮಾನ ಮುಖ್ಯ ಎಂದರು.
ನಾವೂ ಸಹ ನಾಯಕರಿಗೆ ಕೆಲವೊಂದು ಸಲಹೆಗಳನ್ನು ಕೊಟ್ಟಿದ್ದೇವೆ. ಜನರಿಂದ ನೇರವಾಗಿ ಆಯ್ಕೆಯಾದವರಿಗೆ ಸಚಿವ ಸ್ಥಾನ ಕೊಡೋದು ಶಿμÁ್ಟಚಾರ. ಪಕ್ಷ, ಸರ್ಕಾರಕ್ಕಿಂತ ಯಾರೂ ದೊಡ್ಡವರಲ್ಲ ಎಂದು ಅವರು ಹೇಳಿದರು.
Laxmi News 24×7