ವಿಜಯಪುರ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ನಮ್ಮ ಬದ್ಧತೆ. ಸರ್ಕಾರ ಇರುವವರೆಗೂ ಈ ಯೋಜನೆಗಳು ಇರುತ್ತವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ.ಪಾಟೀಲ್ ತಿಳಿಸಿದರು.
ಜಿಲ್ಲೆಯ ತಿಕೋಟಾ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಗ್ಯಾರಂಟಿ ಯೋಜನೆಗಳು ಯಾವ ಕಾಲಕ್ಕೂ ನಿಲ್ಲುವುದಿಲ್ಲ.
ಅವುಗಳನ್ನು ಮುಂದುವರಿಸಿಕೊಂಡು ಹೋಗುತ್ತೇವೆ. ಆದಾಗ್ಯೂ, ಅಭಿವೃದ್ಧಿಗೆ ಹಣ ಏನು ಶೇಖರಣೆ ಮಾಡಬೇಕು, ಮಾಡುತ್ತೇವೆ’ ಎಂದರು.
ನಮ್ಮ ಸಿಎಂ ಹಣಕಾಸಿನ ತಜ್ಞರು. 15 ಬಜೆಟ್’ಗಳನ್ನು ಮಂಡನೆ ಮಾಡಿದ್ದಾರೆ. ಹೀಗಾಗಿ ಗ್ಯಾರಂಟಿಗಳ ಬಗ್ಗೆ ಯಾರಿಗೂ ಸಂಶಯ ಬೇಡ. ಅಭಿವೃದ್ಧಿಗೂ ಹಣ ಒದಗಿಸುತ್ತೇವೆ. ಈಗಲೂ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ, ನಡೆಯುತ್ತಿವೆ ಎಂದು ಹೇಳಿದರು.