Breaking News

ನಾಳೆ ಸ್ವಾತಂತ್ರ್ಯ ದಿನಾಚರಣೆ ವೇಳೆ ‘ಡಾ.ಬಿಆರ್ ಅಂಬೇಡ್ಕರ್ ಪೋಟೋ’ ಇಡುವುದು ಕಡ್ಡಾಯ: ರಾಜ್ಯ ಸರ್ಕಾರ

Spread the love

ಬೆಂಗಳೂರು: ನಾಳೆ ದೇಶ, ರಾಜ್ಯಾಧ್ಯಂತ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಈ ಸ್ವಾತಂತ್ರೋತ್ಸ ವೇಳೆ ಡಾ.ಬಿಆರ್ ಅಂಬೇಡ್ಕರ್ ಪೋಟೋ ಇಡುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಸುತ್ತೋಲೆ ಹೊರಡಿಸಿದ್ದು, ಜನವರಿ 26ರ ಗಣರಾಜ್ಯೋತ್ಸವ ದಿನದೊಂದಿಗೆ ಆಗಸ್ಟ್-15ರ ಸ್ವಾತಂತ್ರ್ಯ ದಿನಾಚರಣೆಯಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ||ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

 

ಮುಂದುವರೆದು, ನವೆಂಬರ್-26ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ||ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದ್ದಾರೆ.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ