Breaking News

ಬೈಲಹೊಂಗಲದ ಬಳಿ ಕ್ಯಾಂಟರ್ ಪಲ್ಟಿ: ಮೂರು ಕರು ಸಾವು

Spread the love

ಬೈಲಹೊಂಗಲ: ತಾಲ್ಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೆದ್ದಾರಿಯಲ್ಲಿ ಗುರುವಾರ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ, ಮೂರು ಕರುಗಳು ಮೃತಪಟ್ಟಿವೆ.

ಮಹಾರಾಷ್ಟ್ರ ನೋಂದಣಿ ಹೊಂದಿದ ಕ್ಯಾಂಟರ್‌ನಲ್ಲಿ 12 ಗೋವುಗಳನ್ನು ತುಂಬಿಕೊಂಡು ಸಾಗುವಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಚಾಲಕ ಪರಾರಿಯಾಗಿದ್ದಾನೆ. ಘಟನೆಯಲ್ಲಿ 3 ಕರುಗಳು ಮೃತಪಟ್ಟಿದ್ದು, ಎರಡು ಹಸುಗಳ ಸ್ಥಿತಿ ಗಂಭೀರವಾಗಿವೆ.‌ ಏಳು ಹಸುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕ್ಯಾಂಟರ್‌ನಲ್ಲಿ ಸಿಲುಕಿದ್ದ ಹಸುಗಳನ್ನು ಹೊರ ತೆಗೆದರು. ಉಳಿದ 9 ಗೋವುಗಳನ್ನು ವಶಕ್ಕೆ ಪಡೆದು ಇಂಚಲದ ಗೋಶಾಲೆಗೆ ಸಾಗಿಸಿದರು.


Spread the love

About Laxminews 24x7

Check Also

ಬೆಳಗಾವಿ ಜೆಎನ್‌ಎಂಸಿ ಆವರಣದಲ್ಲಿ ತಂಬಾಕು ನಿಯಂತ್ರಣ ಕೋಶದ ‘ಸರ್ಜಿಕಲ್ ಸ್ಟ್ರೈಕ್’: 40 ಪ್ರಕರಣ ದಾಖಲು!

Spread the loveಬೆಳಗಾವಿಯ ಜೆಎನ್‌ಎಂಸಿ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆ ಜಂಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ