ಹಾಸನ : ಹಾಸನ ಜಿಲ್ಲೆಯಲ್ಲೊಂದು ಘೋರ ದುರಂತವೊಂದು ಸಂಭವಿಸಿದ್ದು, ಆನ್ ಲೈನ್ ಗೇಮ್ ಚಟಕ್ಕೆ ಬಿದ್ದು ಒಂದು ಇಡೀ ಕುಟುಂಬವೇ ಸಾವಿಗೆ ಶರಣಾಗಿದೆ.
ಹೌದು, ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕೆರೆಬೀದಿಯಲ್ಲಿ ಆನ್ ಲೈನ್ ಗೇಮ್ ಚಟಕ್ಕೆ ಬಿದ್ದು, ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಗಂಡ-ಹೆಂಡತಿ ಹಾಗೂ ಪುತ್ರಿ ಮೂವರು ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಶ್ರೀನಿವಾಸ್(43), ಶ್ವೇತಾ(36) ಹಾಗೂ ಅವರ ಮಗಳು ನಾಗಶ್ರೀ(13) ಎಂದು ಗುರುತಿಸಲಾಗಿದೆ.
ಶ್ರೀನಿವಾಸ್ ಆನ್ ಲೈನ್ ಗೇಮ್ ಆಡುತ್ತಿದ್ದರು ಎನ್ನಲಾಗಿದ್ದು, ಇದರಿಂದ ಸಾಲ ಮಾಡಿದ್ದರು. ಸಾಲ ತೀರಿಸಲಾಗಿದೆ. ಕುಟುಂಬ ಸಮೇತ ಹೇಮಾವತಿ ಕಾಲುವೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಮೃತ ಶ್ರೀನಿವಾಸ್ ಕಾರು ಚಾಲಕನಾಗಿದ್ದರು ಮತ್ತು ಅವರ ಪತ್ನಿ ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಹೇಮಾವತಿ ನಾಲೆಗೆ ಹಾರಿ ಮೂವರು ಆತ್ಮಹತ್ಯೆಗೆ ಶರಣಾಗಿರುವುದು ಗೊತ್ತಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಶವವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ನುಗ್ಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7