ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಸೇರಿ 28 ಜನರ ವಿರುದ್ಧ `FIR’ ದಾಖಲು!
ಬೆಂಗಳೂರು : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಸೇರಿದಂತೆ 28 ಬಿಜೆಪಿ ನಾಯಕರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ರಾಜ್ಯ ಸರ್ಕಾರದ ವಿರುದ್ಧ ನಡೆಸಿದ ಪ್ರತಿಭಟನೆ ಸಂಬಂಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್.
ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ. ಮೋಹನ್, ಶಾಸಕರಾದ ಎಸ್. ಮುನಿರಾಜು, ಎನ್. ರವಿಕುಮಾರ್ ಸೇರಿದಂತೆ ಒಟ್ಟು 28 ಬಿಜೆಪಿ ನಾಯಕರು ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಕಳೆದ ವರ್ಷದ ಜೂನ್ ನಲ್ಲಿ ಬೆಂಗಳೂರಿನ ಮೌರ್ಯ ವೃತ್ತದ ಬಳಿ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಅನುಸರಿತ್ತದೆ ಎಂದು ಆರೋಪಿ ಬಿಜೆಪಿ ನಾಯಕರು ಪೊಲೀಸರಿಂದ ಪೂರ್ವಾನುಮತಿ ಪಡೆಯದೇ ಪ್ರತಿಭಟನೆ ನಡೆಸಿದ್ದರು ಎನ್ನುವ ಆರೋಪದ ಕೇಳಿ ಬಂದ ಹಿನ್ನೆಲೆಯಲ್‌ಇ ಕೋರ್ಟ್ ಅನುಮತಿ ಪಡೆದು ದೂರು ದಾಖಲಾಗಿದೆ.
Laxmi News 24×7