Breaking News
Home / ಜಿಲ್ಲೆ / ಬೆಂಗಳೂರು / ನಾಳೆ ಬೆಂಗಳೂರಲ್ಲಿ ಆಟೋ, ಟ್ಯಾಕ್ಸಿ ಸಿಗಲ್ಲ.

ನಾಳೆ ಬೆಂಗಳೂರಲ್ಲಿ ಆಟೋ, ಟ್ಯಾಕ್ಸಿ ಸಿಗಲ್ಲ.

Spread the love

ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ರಸ್ತೆಗೆ ಇಳಿಯುವ ಎನ್ನ ಎಚ್ಚರವಾಗಿರಿ. ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ನಾಳೆ ಆಟೋ- ಟ್ಯಾಕ್ಸಿ ಚಾಲಕರು ಮುಷ್ಕರ ಕರೆ ನೀಡಿದ್ದಾರೆ.

ವಾಹನಗಳ ಸಾಲಮನ್ನಾ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವ ಕುರಿತಾಗಿ 20 ಒಕ್ಕೂಟಗಳು ಸೇರಿ ನಾಳೆ ಮುಷ್ಕರಕ್ಕೆ ಕರೆ ನೀಡಿವೆ.

ಬೇಡಿಕೆ ಏನು?
ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಜಾತಿವಾರು ನಿಗಮಗಳಿಂದ ನೇರ ಸಾಲ ಯೋಜನೆ ಅಡಿಯಲ್ಲಿ ಆಟೋ ಚಾಲಕರಿಗೆ 1,00 ಲಕ್ಷ ರೂ ಮತ್ತು ಟ್ಯಾಕ್ಸಿ ಚಾಲಕರುಗಳಿಗೆ 2,00 ಲಕ್ಷ ಸಾಲವನ್ನು ನೀಡಬೇಕು.
– ಅಸಂಘಟಿತ ಚಾಲಕರ ನಿಗಮ ಸ್ಥಪನೆಯಾಗಬೇಕು.
– ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಬಿಡಿಎ ಅಥವಾ ಗೃಹ ಮಂಡಳಿಯಿಂದ ಮನೆಗಳನ್ನು ಕಟ್ಟಿಸಿಕೊಡಬೇಕು.
– ಕೊರೊನಾ ವೈರಸ್ ಸಂಕಷ್ಟದಲ್ಲಿ ಇರುವ ಚಾಲಕರ ವಾಹನಗಳನ್ನು ಅನಧಿಕೃತವಾಗಿ ಮುಟ್ಟುಗೋಲು ಹಾಕಿಕೊಳ್ಳುವುದು ಹಾಗೂ ದುಬಾರಿ ಬಟ್ಟಿ ವಸೂಲಿ ಮಾಡುವುದನ್ನು ನಿಲ್ಲಿಸಬೇಕು.

-ವಾಹನಗಳ ಕಂತುಗಳ ಮೇಲಿನ ಹೆಚ್ಚುವರಿ ಬಡ್ಡಿಯನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಬೇಕು. ಬಡ್ಡಿ ವಜಾ ಮಾಡಲು ಸರ್ಕಾರ ಕ್ರಮಕೈಗೊಳ್ಳಬೇಕು.
– ಹೊಸ ಆಟೋರಿಕ್ಷಾ ಮಾರಾಟ ತೆರಿಗೆಯನ್ನು 17% ರಿಂದ 5%ಕ್ಕೆ ಇಳಿಸಬೇಕು.
– ನಕಲಿ ಆಟೋ ಪರ್ಮಿಟ್‍ಗಳನ್ನು ತಡೆಗಟ್ಟಲು, ಹೊಸದಾಗಿ ತಂದಿರುವ ಇ-ಪರ್ಮಿಟ್‍ಗೆ ಆಧಾರ್ ಲಿಂಕ್ ಹಾಗೂ ಮಾಲೀಕನೇ ಖುದ್ದು ಹೆಬ್ಬೆಟ್ಟು ಗುರುತು ನೀಡುವುದನ್ನು ಕಡ್ಡಾಯಗೊಳಿಸಬೇಕು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ