Breaking News

ಬೆಂಗಳೂರಿನಲ್ಲಿ ಮಳೆರಾಯನ ಆರ್ಭಟ: ವಾಹನ ಸವಾರರು ಪರದಾಟ

Spread the love

ಬೆಂಗಳೂರು, ಆ.16: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿವರಮಹಾಲಕ್ಷ್ಮಿಹಬ್ಬದಂದೆ ವರುಣನ ಆಗಮನವಾಗಿದೆ. ದಿಢೀರ್ ಮಳೆಗೆ ಹಬ್ಬದ ಸಡಗರದಲ್ಲಿದ್ದ ಸಿಟಿಮಂದಿ ಸುಸ್ತಾಗಿದ್ದಾರೆ. ನಗರದ ವಿಧಾನ ಸೌಧ, ಕಾರ್ಪೊರೇಷನ್ ಸರ್ಕಲ್, ರಾಜಾಜಿನಗರ, ವಿಜಯನಗರ, ಬಸವೇಶ್ವರನಗರ, ಶಾಂತಿನಗರ, ರಿಚ್ಮಂಡ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆ(Rain) ಆಗಿದ್ದು, ದಿಢೀರ್​ ಮಳೆಯಿಂದಾಗಿ ವಾಹನ ಸವಾರರು ಪರದಾಟ ನಡೆಸಿದ್ದಾರೆ.

ಇನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲೂ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ಪೀಣ್ಯಾ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಹೆಸರಘಟ್ಟ ಸೇರಿದಂತೆ ಹಲವಾರು ಕಡೆ ಮಳೆ ಆರಂಭವಾಗಿದೆ.

ಳೆದ ಮೂರು ದಿನಗಳ ಹಿಂದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿದ್ದು, ರಾಜಧಾನಿಯ ಹಲವು ರಸ್ತೆಗಳು ಕೆಸರು ನೀರು ನಿಂತು ಜಲಾವೃತಗೊಂಡಿತ್ತು.

ಅದರಂತೆ ಇಂದುವರಮಹಾಲಕ್ಷ್ಮಿ ಹಬ್ಬದಂದೆ ನಗರದ ಹಲವೆಡೆ ವರುಣನ ಆಗಮನವಾಗಿದ್ದು, ದಿಢೀರ್​ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ