ಬೆಳಗಾವಿ: ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ಕಾಂಗ್ರೆಸ್ ಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಬಿಜೆಪಿ ನಾಯಕರು ಹಾಗೂ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿದರು.
ಶಾಸಕ ಆಸೀಫ್ ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮೃಣಾಲ್ ಹೆಬ್ಬಾಳಕರ ಇತರರಿದ್ದರು.
Laxmi News 24×7