Breaking News

ಬೆಳಗಾವಿ: ಕೆರೆಯಲ್ಲಿ ಮುಳುಗಿ ಬಾಲಕ ಸಾವು

Spread the love

ಎಂ.ಕೆ.ಹುಬ್ಬಳ್ಳಿ (ಬೆಳಗಾವಿ ಜಿಲ್ಲೆ): ಪಟ್ಟಣದ ಬಳಿ ಇರುವ ಗದ್ದಿಕೆರೆಯಲ್ಲಿ ಸೋಮವಾರ ಬೆಳಿಗ್ಗೆ ಶಾಲಾ ಬಾಲಕನ ಶವ ಪತ್ತೆಯಾಗಿದೆ.

ಎಂ.ಕೆ.ಹುಬ್ಬಳ್ಳಿಯಲ್ಲಿ 9ನೇ ತರಗತಿ ಓದುತ್ತಿದ್ದ ರಿಹಾನ್‌ ಮುಗುಟಸಾಬ ನಗಾರಸಿ (15) ಮೃತ ಬಾಲಕ. ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಬಾಲಕ ಕೆರೆಗೆ ಈಜಲು ಹೋಗಿದ್ದ.

ಮರಳಿ ಮನೆಗೆ ಬಂದಿರಲಿಲ್ಲ. ಕೆರೆ ದಡದಲ್ಲಿ ಬಾಲಕನ ಬಟ್ಟೆ ಹಾಗೂ ಚಪ್ಪಲಿ ಪತ್ತೆಯಾದವು. ಅನುಮಾನಗೊಂಡು ಸೋಮವಾರ ಕೆರೆಯಲ್ಲಿ ಹುಡುಕಾಟ ಶುರು ಮಾಡಲಾಯಿತು. ಸ್ಥಳಕ್ಕೆ ಧಾವಿಸಿದ ಪೊಲೀಸರು, ಅಗ್ನಿಶಾಮಕ ದಳ ಹಾಗೂ ರಾಜ್ಯ ವಿಪತ್ತು ಸ್ಪಂದನಾ ಪಡೆಯ ಸಿಬ್ಬಂದಿ ಬಾಲಕನ ಶವ ಪತ್ತೆ ಮಾಡಿದರು.

ಈಜಲು ಹೋದ ಬಾಲಕ ಹೇಗೆ ಮುಳುಗಿದ ಎಂಬುದು ಇನ್ನೂ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ