Breaking News

ಕಾರುಗಳ ಡಿಕ್ಕಿ: ಒಬ್ಬ ಸಾವು

Spread the love

ಖಾನಾಪುರ: ತಾಲ್ಲೂಕಿನ ನಾಗರಗಾಳಿ ಗ್ರಾಮದ ಹೊರವಲಯದ ರಾಮನಗರ-ಧಾರವಾಡ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಒಬ್ಬ ಚಾಲಕ ಮೃತಪಟ್ಟು ಮತ್ತೊಬ್ಬ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗೋವಾದಿಂದ ಹುಬ್ಬಳ್ಳಿ ಮಾರ್ಗವಾಗಿ ತೆಲಂಗಾಣ ರಾಜ್ಯದತ್ತ ಹೊರಟಿದ್ದ ಪ್ರಯಾಣಿಕರ ಕಾರು ಅಳ್ನಾವರದಿಂದ ರಾಮನಗರ ಕಡೆಗೆ ಹೊರಟಿದ್ದ ಕಾರಿಗೆ ಎದುರಿನಿಂದ ಬಂದು ವೇಗವಾಗಿ ಅಪ್ಪಳಿಸಿದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಮೃತರನ್ನು ವಾಸ್ಕೋ ನಿವಾಸಿ ಅಮೀರಖಾನ ಬೆಂಡಿಗೇರಿ (26) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದ ಮೂಲದ ರಾಜಶೇಖರ ರೆಡ್ಡಿ ಗಾಯಗೊಂಡಿದ್ದಾರೆ. ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ