Breaking News

200 ನೇ ಕಿತ್ತೂರು ವಿಜಯೋತ್ಸವಕ್ಕೆ 40 ಕೋಟಿ ರೂ.ಅನುದಾನ

Spread the love

ನ್ನಮ್ಮನ ಕಿತ್ತೂರು: 2024 ನೇ ಸಾಲಿನ ಚನ್ನಮ್ಮನ ಕಿತ್ತೂರು ವಿಜಯೋತ್ಸವವನ್ನು ಸಂಭ್ರಮದಿಂದ ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಸೋಮವಾರ(ಆ19) ಬೆಂಗಳೂರಿನ ವಿಕಾಸ ಸೌಧದಲ್ಲಿ ಕಂದಾಯ ಸಚಿವ ಹಾಗೂ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿತು.

 

200ನೇ ಕಿತ್ತೂರು ವಿಜಯೋತ್ಸವದ ಉತ್ಸವಕ್ಕೆ ಚನ್ನಮ್ಮನ ಕಿತ್ತೂರು ಕೋಟೆ ಆವರಣದಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲು 35 ಕೋಟಿ ರೂ. ಹಾಗೂ ಉತ್ಸವಕ್ಕೆ ರೂ 5 ಕೋಟಿ ಸೇರಿದಂತೆ ಒಟ್ಟು 40 ಕೋಟಿ ರೂ. ಕಾಮಗಾರಿಗೆ ಅನುಮೋದನೆ ನೀಡಿ ಅನುದಾನವನ್ನು ಸಚಿವ ಕೃಷ್ಣ ಬೈರೇಗೌಡ ಬಿಡುಗಡೆಗೊಳಿಸಿದರು.

ಗ್ಯಾರಂಟಿ ಅನುಷ್ಠಾನದ ಮಧ್ಯೆ ಇತರೆ ಕಾಮಗಾರಿಗಳಿಗೆ ಸರ್ಕಾರ ಅನುದಾನ ಒದಗಿಸುತ್ತಿಲ್ಲ ಎಂಬ ಅಪವಾದದ ಮಧ್ಯೆಯೂ ಶಾಸಕ ಬಾಬಾಸಾಹೇಬ ಪಾಟೀಲ ಅವಿರತ ಪ್ರಯತ್ನದಿಂದ 200ನೇ ಕಿತ್ತೂರು ವಿಜಯೋತ್ಸವಕ್ಕೆ ವಿಶೇಷ ಕಾಳಜಿ ತೋರಿ ಅನುದಾನ ಪಡೆಯುವಲ್ಲಿ ಸಫಲರಾಗಿದ್ದಾರೆ.

ದೇಶದಲ್ಲಿ ಪ್ರಥಮ ಸ್ವಾತಂತ್ರದ ಕಿಚ್ಚು ಹತ್ತಿಸಿದ ಕೀರ್ತಿ ಕಿತ್ತೂರಿನ ರಾಣಿ ಚನ್ನಮ್ಮನಿಗೆ ಸಲ್ಲುತ್ತದೆ. ಈ ಬಾರಿಯ ಉತ್ಸವ 200 ನೇ ವರ್ಷದ ವಿಜಯೋತ್ಸವ ರಾಷ್ಟ್ರಮಟ್ಟದ ಉತ್ಸವವಾಗಬೇಕು, ದೇಶದಾತ್ಯಂತ ಜನರು ಚನ್ನಮ್ಮನ ಕಿತ್ತೂರು ನಾಡಿನ ಕಡೆಗೆ ಪ್ರವಾಸಕ್ಕೆ ಆಗಮಿಸುವಂತೆ ಪ್ರವಾಸಿ ಹಬ್ಬವಾಗಬೇಕು ಎನ್ನುವುದು ಶಾಸಕ ಬಾಬಾಸಾಹೇಬ್ ಪಾಟೀಲ ಅವರ ಒತ್ತಾಯವಾಗಿತ್ತು.


Spread the love

About Laxminews 24x7

Check Also

ಮುಂದಿನ ಪೀಳಿಗೆಗಾಗಿ ವನ್ಯ ಸಂಪತ್ತನ್ನು ಸಂರಕ್ಷಿಸಿ ಇಡುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ

Spread the love ಖಾನಾಪುರ: ‘ಮುಂದಿನ ಪೀಳಿಗೆಗಾಗಿ ವನ್ಯ ಸಂಪತ್ತನ್ನು ಸಂರಕ್ಷಿಸಿ ಇಡುವ ಗುರುತರ ಜವಾಬ್ದಾರಿ ನಮ್ಮೆಲ್ಲ ಮೇಲಿದೆ. ಪ್ರಪಂಚ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ