Breaking News

ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ;C.M.,ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು;H.D.K

Spread the love

ಬೆಂಗಳೂರು, ಆಗಸ್ಟ್ 21: ಅಗತ್ಯವಿದ್ದರೆ ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ ಎಂದು ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದು, ನನಗೆ ಭಯ ಶುರುವಾಗಿದೆಯಾ? ನನ್ನ ನೋಡಿದರೆ ನಿಮಗೆ ಹಾಗೆ ಅನಿಸುತ್ತಾ?

ಸಿಎಂ ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ? ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯಗಳು ಬರಬೇಕುಎಂದು ಸವಾಲು ಹಾಕಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಮೈಸೂರಿನ ಮೂಡಾ ದಾಖಲೆ ಇದೆಯಲ್ಲ. ಮುಡಾ ಆಸ್ತಿಯನ್ನು ನನ್ನ ಆಸ್ತಿ ಎಂದು ಹೇಳುತ್ತಿದ್ದಾರೆ. ಇಂತಹ ಭಂಡತನ ಯಾವ ಸಿಎಂ ಕೂಡ ತೋರಿಲ್ಲ. ನನ್ನ ಬಂಧನ ಮಾಡುವುದಕ್ಕೆ ನೂರು ಜನ ಸಿದ್ದರಾಮಯ್ಯರು ಬರಬೇಕು ಎಂದು ವಾಗ್ದಾಳಿ ನಡೆಸಿದರು.

ನನಗೆ ಯಾವುದೇ ಭಯ ಇಲ್ಲ. ನನ್ನ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಅನುಮೋದನೆಗೆ ಕೋರಿದ್ದಾರೆ. ಅನುಮತಿ ಕೋರಿರೋದು 2023 ನವೆಂಬರ್‌ನಲ್ಲಿ. ಸುಮಾರು ಹತ್ತು ತಿಂಗಳಾಗಿದೆ ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ