ಬೆಳಗಾವಿ: ತಾಲ್ಲೂಕಿನ ಕರ್ಲೆ ಬಳಿ ವ್ಯಕ್ತಿಯೊಬ್ಬರ ಕೊಲೆ ಮಾಡಿದ ಪ್ರಕರಣದ ತನಿಖೆಗಾಗಿ ಎರಡು ವಿಶೇಷ ತಂಡ ರಚಿಸಲಾಗಿದೆ.
ಕರ್ಲೆ-ಬಾದರವಾಡಿ ರಸ್ತೆಯಲ್ಲಿ ಸೋಮವಾರ ಹೊರಟಿದ್ದ ಮೋಹನ ತಳವಾರ(55) ಅವರನ್ನು ದುಷ್ಕರ್ಮಿಗಳು ತಡೆದು, ಮಾರಕಾಸ್ತ್ರಗಳಿಂದ ಹೊಡೆದು ಹಲ್ಲೆ ಮಾಡಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
‘ಮೋಹನ ಕೊಲೆ ಯಾವ ಕಾರಣಕ್ಕೆ ನಡೆದಿದೆ ಎಂಬುದು ತಿಳಿದುಬಂದಿಲ್ಲ. ಎರಡು ವಿಶೇಷ ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಆರೋಪಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಸುದ್ದಿಗಾರರಿಗೆ ತಿಳಿಸಿದರು.
Laxmi News 24×7