ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ತೆರಿಗೆ ಸಮಿತಿಯಿಂದ ಸರಕು ಮತ್ತು ಸೇವಾ ತೆರಿಗೆಯಲ್ಲಿ (ಜಿಎಸ್‌ಟಿ) ಇತ್ತೀಚಿನ ಬದಲಾವಣೆ ಕುರಿತ ವಿಚಾರ ಸಂಕಿರಣವನ್ನು ಸಂಸ್ಥೆಯ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿತ್ತು.
ಲೆಕ್ಕಪರಿಶೋಧಕ ಶಂಭುಲಿಂಗಪ್ಪ ಪಾಟೀಲ ಅವರು, ಆದಾಯ ತೆರಿಗೆ ಕಾಯ್ದೆಯ ತಿದ್ದುಪಡಿ, ಪರಿಷ್ಕೃತ ತೆರಿಗೆ ಪದ್ಧತಿ ಕುರಿತು ಮಾಹಿತಿ ನೀಡಿದರು.
ಲೆಕ್ಕಪರಿಶೋಧಕ ಕಿರಣ್ ಶಾವಿ ಅವರು, ಜಿಎಸ್‌ಟಿ ಕಾಯ್ದೆಯಲ್ಲಿನ ಬದಲಾವಣೆ ಬಗ್ಗೆ ತಿಳಿಸಿದರು. ಉದ್ದಿಮೆದಾರರೊಂದಿಗೆ ಸಂವಾದ ನಡೆಯಿತು.
ಸಂಸ್ಥೆಯ ಅಧ್ಯಕ್ಷ ಎಸ್.ಪಿ. ಸಂಶಿಮಠ, ತೆರಿಗೆ ಸಮಿತಿ ಅಧ್ಯಕ್ಷ ಕಾರ್ತಿಕ ಶೆಟ್ಟಿ, ಗೌರವ ಕಾರ್ಯದರ್ಶಿ ರವೀಂದ್ರ ಎಸ್. ಬಳಿಗಾರ ಹಾಜರಿದ್ದರು.
Laxmi News 24×7