Breaking News

ವೈದ್ಯಕೀಯ ಕೇಸ್​ ಅಂತೇಳಿ ಅಕ್ರಮವಾಗಿ 46 ಬಿಪಿಎಲ್​ ಕಾರ್ಡ್​ ಕೊಟ್ಟ ಆಹಾರ ಶಿರಸ್ತುದಾರ

Spread the love

ಬೆಂಗಳೂರು:ಹೊಸ ಕಾರ್ಡ್​ಗಾಗಿ ಅರ್ಜಿದಾರರು 3 ವರ್ಷದಿಂದ ಜಾತಕಪಕ್ಷಿಯಂತೆ ಕಾಯುತ್ತಿರುವ ನಡುವೆಯೂ ಅರ್ಹತೆ ಹೊಂದಿಲ್ಲದ 46 ಮಂದಿಗೆ ಅಕ್ರಮವಾಗಿ ಬಿಪಿಎಲ್​ ಕಾರ್ಡ್​ ಮಂಜೂರು ಮಾಡಿರುವುದು ಆಹಾರ ಇಲಾಖೆಯಲ್ಲಿ ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಆಹಾರ ಶಿರಸ್ತುದಾರನಾಗಿ ಕಾರ್ಯನಿರ್ವಹಿಸುತ್ತಿರುವ ಜಿ.

ತಿಮ್ಮಯ್ಯ ಎಂಬುವರು, ಲಂಚ ಪಡೆದು ವಿಶೇಷ ‘ವೈದ್ಯಕಿಯ ಕೇಸ್​’ ವಿನಾಯಿತಿ ದುರ್ಬಳಕೆ ಮಾಡಿಕೊಂಡು ಅನಧಿಕೃತವಾಗಿ 46 ಬಿಪಿಎಲ್​ ಚೀಟಿ ಕೊಟ್ಟಿರುವುದು ಚಿಕ್ಕಮಗಳೂರು ಜಿಲ್ಲಾಧಿಕಾರಿ, ಆಹಾರ ಇಲಾಖೆ ಆಯುಕ್ತರಿಗೆ ಕೊಟ್ಟಿರುವ ವರದಿಯಲ್ಲಿ ಬಹಿರಂಗವಾಗಿದೆ.

ರಾಜ್ಯ ಸರ್ಕಾರ ಹೊಸ ಪಡಿತರ ಚೀಟಿ ಮಂಜೂರು, ಸೇರ್ಪಡೆ, ತಿದ್ದುಪಡಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಹೀಗಾಗಿ, ಹೊಸ ರೇಷನ್​ ಕಾರ್ಡ್​ಗೆ ಅರ್ಜಿ ಸಲ್ಲಿಸಿ ಮೂರು ವರ್ಷದಿಂದ ಕಾಯುತ್ತಿರುವವರಿಗೆ ಹಾಗೂ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸುತ್ತಿರುವವರಿಗೆ ತೀವ್ರ ನಿರಾಸೆಯಾಗಿದೆ. ಆದರೆ, ಕ್ಯಾನ್ಸರ್​,ಕಿಡ್ನಿ,ಹೃದಯ ಸೇರಿ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಹೊಸ ಬಿಪಿಎಲ್​ ನೀಡುವಂತೆ ಆಹಾರ ಇಲಾಖೆಗೆ ಸರ್ಕಾರ ಅನುಮತಿ ಕೊಟ್ಟಿದೆ. ಹಾಗಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಉದ್ದೇಶದಿಂದ 3 ವರ್ಷದ ಹಿಂದೆ ಸಲ್ಲಿಕೆಯಾದ ಅರ್ಜಿಗಳು ಮತ್ತು ಈಗ ಸಲ್ಲಿಸುವ ಅರ್ಜಿಯನ್ನು ವಿಶೇಷ ‘ವೈದ್ಯಕಿಯ ಕೇಸ್​’ ಎಂದು ಪರಿಗಣಿಸಿ ಇಲಾಖೆಯಿಂದ ಬಿಪಿಎಲ್​ ನೀಡಲಾಗುತ್ತಿದೆ.

ಇದನ್ನೇ ದುರ್ಬಳಕೆ ಮಾಡಿಕೊಂಡ ಆಹಾರ ಶಿರಸ್ತುದಾರ, ‘ವೈದ್ಯಕಿಯ ಕೇಸ್​’ ಅಡಿ ಸಲ್ಲಿಕೆಯಾಗಿರುವ 2 ಅರ್ಜಿಗಳಿಗೆ ಕಾರ್ಡ್​ ನೀಡಬೇಕಿತ್ತು. ಆದರೆ, ಎರಡು ಕಾರ್ಡ್​ ಬದಲಾಗಿ ‘ವೈದ್ಯಕಿಯ ಕೇಸ್​’ ದುರ್ಬಳಕೆ ಮೂಲಕ 46 ಬಿಪಿಎಲ್​ ಚೀಟಿಯನ್ನು ಲಾಗಿನ್​ನಲ್ಲಿ ನೀಡಿರುವುದು ಕಂಡುಬಂದಿದೆ. ಕರ್ತವ್ಯದಲ್ಲಿ ಪದೇಪದೆ ಲೋಪವೆಸಗುತ್ತಿರುವುದು, ಅನೇಕ ಬಾರಿ ಎಚ್ಚರಿಕೆ ನೀಡಿದ್ದರೂ ತಿದ್ದಿಕೊಂಡಿಲ್ಲ. ಹಾಗಾಗಿ, ಕರ್ನಾಟಕ ರಾಜ್ಯ ನಾಗರಿಕ ಸೇವಾ( ನಡತೆ) ನಿಯಮ ಅನ್ವಯ ಈ ಅಧಿಕಾರಿ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಇಲಾಖೆಗೆ ಜಿಲ್ಲಾಧಿಕಾರಿ ಕೋರಿದ್ದಾರೆ.


Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ