Breaking News

ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲು ‘ಡಿಮಾಂಡ್

Spread the love

ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲು ‘ಡಿಮಾಂಡ್ ಸರ್ವೆ’

“ಡಿಮಾಂಡ್ ಸರ್ವೆ” ಕೈಗೊಳ್ಳುವಂತೆ ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ಏರ್ಪೋರ್ಟ್ ಅಧಿಕಾರಿಗಳ ಸಭೆ ನಡೆಸಿದ ಬೆಳಗಾವಿ ಲೋಕಸಭಾ ಸದಸ್ಯರಾದ ಶ್ರೀ ಜಗದೀಶ್ ಶೆಟ್ಟರ್

ಬೆಳಗಾವಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲು ಅವಶ್ಯಕವೆನಿಸುವ ‘ಡಿಮಾಂಡ್ ಸರ್ವೆ’ ಕೈಗೊಳ್ಳುವಂತೆ ಬೆಳಗಾವಿ ಲೋಕಸಭಾ ಸದಸ್ಯರಾದ ಶ್ರೀ ಜಗದೀಶ್ ಶೆಟ್ಟರ್ ಇವರು ಬೆಳಗಾವಿ ಜಿಲ್ಲಾಧಿಕಾರಿಗಳು ದಿನಾಂಕ 21-08-2024 ರಂದು ನಡೆಸಿದ ಏರ್ಪೋರ್ಟ್ ಅಧಿಕಾರಿಗಳ ಸಭೆಯಲ್ಲಿ ಸೂಚಿಸಿದರು.

ಬೆಳಗಾವಿ ವೇಗದಲ್ಲಿ ಬೆಳೆಯುತ್ತಿರುವ ನಗರವಾಗಿದ್ದು, ಬೆಂಗಳೂರು ನಂತರ ಎರಡನೇ ರಾಜಧಾನಿ ಎನಿಸಿಕೊಂಡಿದೆ. ವಿಮಾನ ಸೇವೆಯಲ್ಲಿ ರಾಜ್ಯದಲ್ಲಿ ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣಗಳ ನಂತರ ಮೂರನೆಯ ಅತಿ ದೊಡ್ಡ ನಿಲ್ದಾಣವಾಗಿ ಹೆಸರು ಮಾಡಿದ್ದು, ಇಲ್ಲಿಂದ ಈಗಾಗಲೇ ದಿನನಿತ್ಯ 10 ವಿಮಾನಗಳು ದೇಶದ ವಿವಿಧ ನಗರಗಳಿಗೆ ಸಂಪರ್ಕ ಕಲ್ಪಿಸುವಲ್ಲಿ ಯಶಸ್ವಿಯಾಗಿವೆ. ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ ನಗರದಿಂದ ಹಾಗೂ ಕರ್ನಾಟಕ ರಾಜ್ಯದ ಬೆಳಗಾವಿ ಜಿಲ್ಲೆಗೆ ಹತ್ತಿರವಿರುವ ಬಾಗಲಕೋಟೆ, ವಿಜಯಪುರ, ಧಾರವಾಡ ಜಿಲ್ಲೆಯಿಂದಲೂ ಸಹ ವಿಮಾನ ಪ್ರಯಾಣಿಕರು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ವಿವಿಧ ನಗರಗಳಿಗೆ ಪ್ರವಾಸ ಮಾಡುತ್ತಿರುವುದು ವಿಶೇಷ ಎಂದು ಸಂಸದರು ಈ ಜಗದೀಶ್ ಶೆಟ್ಟರ್ ಸಭೆಯಲ್ಲಿ ಪ್ರಸ್ತಾಪಿಸಿದರು.

ಬೆಳಗಾವಿ ವಿಮಾನ ನಿಲ್ದಾಣ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೆ ಏರಿಸಲು ಎಲ್ಲ ಅರ್ಹತೆ ಹೊಂದಿದ್ದು ಹಾಗೂ ಸಾರ್ವಜನಿಕರ ಬೇಡಿಕೆಯು ಸಹ ಆಗಿದ್ದು, ಈ ಕುರಿತು ಪ್ರಾರಂಭದಲ್ಲಿ ಅಗತ್ಯವೆನಿಸಿರುವ ‘ಡಿಮಾಂಡ್ ಸರ್ವೆ’ ಕೈಗೊಳ್ಳುವ ಬಗ್ಗೆ ಬೆಳಗಾವಿ ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕರು ಮುಂದಿನ ಕ್ರಮವನ್ನು ಜರುಗಿಸಲು ಸಭೆಯಲ್ಲಿ ಸೂಚಿಸಿದರು.

ಸಭೆಯಲ್ಲಿ ರಾಜ್ಯಸಭಾ ಸದಸ್ಯರು ಶ್ರೀ ಈರಣ್ಣ ಕಡಾಡಿ ಅವರು ಬೆಳಗಾವಿ ನಗರ (ಉತ್ತರ) ಶಾಸಕರು ಆಸಿಫ್ (ರಾಜು) ಸೇಠ, ಜಿಲ್ಲಾಧಿಕಾರಿಗಳು ಶ್ರೀ ಮಹಮದ ರೋಶನ್, ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕರು ಶ್ರೀ ತ್ಯಾಗರಾಜನ್ ಹಾಜರಿದ್ದರು.


Spread the love

About Laxminews 24x7

Check Also

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ

Spread the love ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ ಖಾನಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ