ಹುಬ್ಬಳ್ಳಿ: ಸಿಎಂ ತಮ್ಮ ಮೇಲಿನ ಮುಡಾ ಹಗರಣದಿಂದ ನುಣುಚಿಕೊಳ್ಳಲು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೇಲಿನ 15ಕ್ಕೂ ಹೆಚ್ಚು ಪ್ರಕರಣಗಳ ದಾಖಲೆಗಳನ್ನು ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇಂತಹ ಯಾವುದೇ ಗೊಡ್ಡು ಬೆದರಿಕೆಗಳಿಗೆ ನಾವು ಹೆದರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.
ವಿಜಯೇಂದ್ರ ಹರಿಹಾಯ್ದರು.
ಶುಕ್ರವಾರ ಶಾಸಕ ಅರವಿಂದ ಬೆಲ್ಲದ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಇವರು ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದರು.
ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಮೇಲೆ 33 ಪ್ರಕರಣ ದಾಖಲಿಸಿದ್ದರು. ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡುವ ಕಾಂಗ್ರೆಸ್ ನಾಯಕರು ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದರು.
ಮುಡಾ ಹಾಗೂ ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ಮುಖ್ಯಮಂತ್ರಿ ನೇರವಾಗಿ ಶಾಮೀಲಾಗಿದ್ದಾರೆ. ಕಾರಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತ ಎಂದರು.