Breaking News

ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ

Spread the love

ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ

ಚಿಕ್ಕೋಡಿ, ಆಗಸ್ಟ್​.25: ಮಹಿಳೆಯರಿಗೆ ಸಹಾಯವಾಗಲೆಂದು ರಾಜ್ಯ ಸರ್ಕಾರ (Karnataka Government) ಆರಂಭಿಸಿದ ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಹಣ ಸಾವಿರಾರು ಮಹಿಳೆಯರಿಗೆ ಸಹಾಯಕವಾಗಿದೆ. ಕೆಲ ಕಡೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಎಂಬ ಬಗ್ಗೆ ಗೊಂದಲಗಳು ನಡೆಯುತ್ತಿದ್ದು ಮತ್ತೊಂದಷ್ಟು ಕಡೆ ಮಹಿಳೆಯರು ಸರ್ಕಾರದ ಯೋಜನೆಯನ್ನು ಕೊಂಡಾಡಿರುವ ಉದಾಹರಣೆಗಳು ಸಿಗುತ್ತವೆ. ಸದ್ಯ ಇಲ್ಲೊಂದು ಅಜ್ಜಿ ತನಗೆ ಬಂದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿ ಸಂಭ್ರಮಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಅಕ್ಕಾತಾಯಿ ಲಂಗೋಟಿ ಎಂಬ ವೃದ್ಧೆ ತನಗೆ ಬಂದ ಹಣದಿಂದ ಊರಿಗೆಲ್ಲಾ ಊಟ ಹಾಕಿಸಿದ್ದಾರೆ. ಸಿದ್ದರಾಮಯ್ಯನವರು ಪ್ರತಿ ತಿಂಗಳು ಎರಡು ಸಾವಿರ ಹಣ ನೀಡ್ತಿದ್ದಾರೆ. ರಾಜಕೀಯವಾಗಿ ಸಿದ್ದರಾಮಯ್ಯನವರು ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕು. ಹೀಗಾಗಿ ಗ್ರಾಮದ ದೇವತೆಗೆ ಪೂಜೆ ಸಲ್ಲಿಸಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದೇನೆ ಎಂದು ತಿಳಿಸಿದರು. ಇನ್ನು ಐದು ಜನ ಮುತ್ತೈದೆಯರಿಗೆ ಉಡಿ ತುಂಬಿ ಅಜ್ಜಿ ಹರಿಸಿದ್ದಾರೆ. ಅಜ್ಜಿಯ ಕಾರ್ಯಕ್ಕೆ ಸುಟ್ಟಟ್ಟಿ ಗ್ರಾಮದ ಮಹಿಳೆಯರು ಸಾಥ್ ನೀಡಿದ್ದಾರೆ.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ