Breaking News

ರಾಜ್ಯಾದ್ಯಂತ ‘ ಶ್ರೀಕೃಷ್ಣ ಜನ್ಮಾಷ್ಟಮಿ’ ಆಚರಣೆ

Spread the love

ಬೆಂಗಳೂರು : ಇಂದು ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಇಂದು ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗಗಳ ವಿವರವನ್ನೂ ಪೊಲೀಸರು ನೀಡಿದ್ದಾರೆ.

ಬೆಂಗಳೂರು ನಗರ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ವೆಸ್ಟ್‌ಆಫ್ ಕಾರ್ಡ್ ರಸ್ತೆಯಲ್ಲಿರುವ ಇಸ್ಕಾನ್ ದೇಗುಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಹಬ್ಬದ ಪ್ರಯುಕ್ತ ಇಂದು ಲಕ್ಷಾಂತರ ಭಕ್ತಾದಿಗಳು ಸೇರಿದಂತೆ ಗಣ್ಯ ವ್ಯಕ್ತಿಗಳು ದೇವರ ದರ್ಶನಕ್ಕೆ ಬರುವ ನಿರೀಕ್ಷೆ ಇದೆ.

ಹೀಗಾಗಿ ದೇವಾಲಯದ ಸುತ್ತಮುತ್ತಲಿನ ರಸ್ತೆಗಳಲ್ಲಿ ಹೆಚ್ಚಿನ ದಟ್ಟಣೆ ಉಂಟಾಗುವ ಸಾಧ್ಯತೆ ಇದ್ದು, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಸಂಚಾರ ಮಾರ್ಪಾಡು ಮಾಡಲಾಗಿದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸ್ ಪ್ರಕಟಣೆ ಉಲ್ಲೇಖಿಸಿದೆ.

ವೆಸ್ಟ್‌ಆಫ್ ಕಾರ್ಡ್ ರಸ್ತೆಯಲ್ಲಿ ಸೋಪ್ ಫ್ಯಾಕ್ಟರಿ ಜಂಕ್ಷನ್‌ನಿಂದ ವಿಜಯನಗರ, ನಂದಿನಿ ಲೇಔಟ್, ಮಹಾಲಕ್ಷ್ಮೀ ಲೇಔಟ್ ಕಡೆ ಹೋಗುವಂತಹ ವಾಹನಗಳು ಸೋಪ್ ಫ್ಯಾಕ್ಟರಿ ಜಂಕ್ಷನ್‌ನಲ್ಲಿ ಡಾ.ರಾಜ್ ಕುಮಾರ್ ರಸ್ತೆಯಲ್ಲಿ ಮುಂದುವರೆದು 10ನೇ ಕ್ರಾಸ್‌ನಲ್ಲಿ ಅಥವಾ ಕೇತಮಾರನಹಳ್ಳಿ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು 1ನೇ ಬ್ಲಾಕ್ ರಾಜಾಜಿನಗರ ಸಿಗ್ನಲ್‌ನಲ್ಲಿ ಕಾರ್ಡ್ ರಸ್ತೆಗೆ ಸೇರುವುದು.

ವೆಸ್ಟ್‌ಆಫ್ ಕಾರ್ಡ್ ರಸ್ತೆಯಲ್ಲಿ ಸೋಪ್ ಫ್ಯಾಕ್ಟರಿ ಜಂಕ್ಷನ್‌ನಿಂದ ಮಹಾಲಕ್ಷ್ಮೀ ಮೆಟ್ರೋ ನಿಲ್ದಾಣದ ವರೆಗೆ ಪಿಕ್‌ಅಪ್ ಮತ್ತು ಡ್ರಾಪ್ ಮಾಡುವುದನ್ನು ನಿಷೇಧಿಸಲಾಗಿದೆ. ಇಸ್ಕಾನ್ ದೇವಸ್ಥಾನಕ್ಕೆ ಸಾರ್ವಜನಿಕರನ್ನು ಕರೆತರುವ ಆಟೋ ಕ್ಯಾಬ್ ಚಾಲಕರು ಮತ್ತು ಸಾರ್ವಜನಿಕರು ಮಹಾಲಕ್ಷ್ಮೀ ಮೆಟ್ರೋ ನಿಲ್ದಾಣದಿಂದ ಸೋಪ್ ಫ್ಯಾಕ್ಟರಿ ಕಡೆಗೆ ಹೋಗುವ ರಸ್ತೆಯಲ್ಲಿ ಪಿಕ್‌ಅಪ್ ಡ್ರಾಪ್ ಮಾಡಬಹುದಾಗಿದೆ.

ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವದ ಪ್ರಯುಕ್ತ ಸಂಚಾರ ನಿರ್ಬಂಧ, ಪರ್ಯಾಯ ರಸ್ತೆಗಳ ವಿವರ, ವಾಹನ ನಿಲುಗಡೆ ಮತ್ತು ನಿಲುಗಡೆ ನಿಷೇಧ ಸಂಬಂಧ ಸಂಚಾರ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಶ್ರೀಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಪ್ರಸಿದ್ಧ ಇಸ್ಕಾನ್ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುವ ನಿರೀಕ್ಷೆಯಿದೆ. ಹೀಗಾಗಿ ಮಾರ್ಗಗಳಲ್ಲಿ ಭಾರಿ ಸಂಚಾರ ದಟ್ಟಣೆ ಸಾಧ್ಯತೆ ಇದೆ.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ