ಬೆಂಗಳೂರು: ಶಾಸಕರ ಹೆಸರಲ್ಲಿ ನಕಲಿ ಸಹಿ, ಲೆಟರ್ ಹೆಡ್ ಸೃಷ್ಟಿಸಿ ವಿಧನಸೌಧದಲ್ಲಿ ಕೆಲಸ ಕೊಡಿಸುರುವ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂದ್ಜಿಸಿದ್ದಾರೆ.
ರಾಮನಗರದ ಸ್ವಾಮಿ (35) ಹಾಗೂ ಅಂಜನ್ ಕುಮಾರ್ (25) ಬಂಧಿತ ಆರೋಪಿಗಳು. ಸ್ವಾಮಿ ವಿಧಾನಸೌಧದಲ್ಲಿ ಇ ಹಿಂದೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ.
ಬಳಿಕ ಕೆಲಸ ಬಿಟ್ಟು ರಾಜಕಾರಣಿಗಳ ಜೊತೆ ಓಡನಾಟ ಬೆಳೆಸಿಕೊಂಡಿದ್ದ. ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಕಲಿ ಲೆಟರ್ ಹೆಡ್ ಸೃಷ್ಟಿಸಿ, ನಕಲಿ ಸಹಿ ಮಾಡಿ ವಿಧನಸೌಧ ಸಚಿವಾಲಯಕ್ಕೆ ಪತ್ರ ಬರೆದು ಪತ್ನಿ ವಿನುತಾ ಹಾಗೂ ಅಂಜನ್ ಎಂಬುವವರಿಗೆ ಶಸಕರ ಆಪ್ತ ಸಹಾಯಕ ಹುದ್ದೆ ಕೊಡಿಸಿದ್ದನು.
ನಕಲಿ ಲೆಟರ್ ಹೆಡ್ ನಂಬಿದ ವಿಧಾನಸೌಧ ಸಚಿವಾಲಯದ ಸಿಬ್ಬಂದಿಗಳು ವಿನುತಾಳಿಗೆ 2023ರ ಮೇನಲ್ಲಿ ಕೆಲಸ ನೀಡಿದ್ದರು. ಬಳಿಕ ವಿನುತಾ ಕೆಲಸಕ್ಕೆ ಬಾರದೇ ತಿಂಗಳಿಗೆ 30 ಸಾವಿರ ಸಂಬಳ ಪಡೆದಿದ್ದಾಳೆ. ವಿಚರಿಸಿದಾಗ ಗರ್ಭಿಣಿಯಾಗಿರುವುದರಿಂದ ಕೆಲಸದಿಂದ ಬಿಡುಗಡೆ ಮಾಡುವ್ಂತೆ ಪತ್ರ ಬರೆದಿದ್ದಳು. ಅನುಮಾನಗೊಂಡು ತನಿಖೆ ನಡೆಸಿದಾಗ ಪ್ರಕರನ ಬೆಳಕಿಗೆ ಬಂದಿದೆ.