Breaking News

ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ. ನಗರಸಭೆಗೆ ಬಿಗಿ ಪೊಲೀಸ್ ಬಂದೋಬಸ್ತ್

Spread the love

ಮುಧೋಳ : ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ ನಗರಸಭೆ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಮಧ್ಯಾಹ್ನ ಎರಡು ಗಂಟೆ ವೇಳೆಗೆ ಆಯ್ಕೆ‌ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

 

ಮುಂಜಾಗೃತ ಕ್ರಮವಾಗಿ ನಗರಸಭೆ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಸೂಕ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಜಿದ್ದಾಜಿದ್ದಿನ‌ ಕಾಳಗಕ್ಕೆ ಸಿದ್ದವಾಗಿರುವ ನಗರಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಕೈ-ಕಮಲ‌ ಪಡೆಗಳ ಮುಖಂಡರು ತೀವ್ರ ಕಸರತ್ತು ನಡೆಸಿದ್ದಾರೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ