ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೋಮವಾರ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ.
ಸೋಮವಾರ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು.
ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನುಮಾರಾಟ ಮಾಡಬಾರದು. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ಆಯುಕ್ತರು ಆದೇಶ ತಿಳಿಸಿದ್ದಾರೆ.