Breaking News

ಗೃಹಲಕ್ಷ್ಮಿ ದುಡ್ಡಲ್ಲಿ ಹೋಳಿಗೆ ಊಟ ಹಾಕಿಸಿದ ಅಜ್ಜಿಗೆ ಸಿಎಂ ಸ್ಪೆಷಲ್‌ ರಿಕ್ವೆಸ್ಟ್‌;

Spread the love

ತ್ತೀಚೆಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸರಿಯಾಗಿ ತಲುಪುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದವು. ಇದರ ನಡುವೆಯೇ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯೊಬ್ಬರು ಮಾಡಿರುವ ಕಾರ್ಯವು ಎಲ್ಲರ ಗಮನ ಸೆಳೆದಿತ್ತು. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಸುಟ್ಟಟ್ಟಿ ಎನ್ನುವ ಗ್ರಾಮದ ಅಕ್ಕಾತಾಯಿ ಲಂಗೂಟಿ ಎನ್ನುವ ವೃದ್ಧೆ ತನಗೆ ಬಂದಿದ್ದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಗ್ರಾಮದ ಮಹಿಳೆಯರಿಗೆ ಹೋಳಿಗೆ ಊಟ ಹಾಕಿಸಿದ್ದರು.

ಇದಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಫುಲ್‌ ಖುಷ್‌ ಆಗಿದ್ದು, ನಮ್ಮ ಗ್ಯಾರಂಟಿ ಯೋಜನೆಗಳ ಯಶಸ್ಸಿಗೆ ಇದು ನಿದರ್ಶನ ಎಂದು ಕೊಂಡಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿ ಸಂತಸ ಹಂಚಿಕೊಂಡಿರುವ ಅವರು, ʼಗೃಹಲಕ್ಷ್ಮಿಯರಿಗೆ ಬೆಲೆಯೇರಿಕೆಯ ಬಿಸಿ ತಟ್ಟದಿರಲಿ ಎಂಬ ಸದುದ್ದೇಶದಿಂದ ನಾವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದಾನವಾಗಿದೆ. ಗೃಹಲಕ್ಷ್ಮಿಯ ಹಣ ಮಕ್ಕಳ ವಿದ್ಯಾಭ್ಯಾಸ, ಮನೆಗೆ ದಿನಸಿ, ಹಬ್ಬಕ್ಕೆ ಬಟ್ಟೆ, ಆಸ್ಪತ್ರೆ ಖರ್ಚು ವೆಚ್ಚ ಭರಿಸಲು ಬಳಕೆಯಾದ ಬಹಳಷ್ಟು ಸುದ್ದಿಗಳನ್ನು ಮಾಧ್ಯಮಗಳಲ್ಲಿ ಕಂಡಿದ್ದೆ. ಅವೆಲ್ಲವೂ ಯೋಜನೆಯ ಯಶಸ್ಸಿಗೆ ಹಿಡಿದ ಕನ್ನಡಿಯಂತಿದ್ದವುʼ ಎಂದಿದ್ದಾರೆ.

ʼಆದರೆ ಇಂದು ಬೆಳಗಾವಿ‌ ಜಿಲ್ಲೆಯ ರಾಯಬಾಗ್ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೂಟಿ ಎಂಬ ಹಿರಿಯ ಜೀವವೊಂದು ತನಗೆ ಬಂದ ಗೃಹಲಕ್ಷ್ಮಿಯ ಹಣದಲ್ಲಿ ಊರಿನ ಜನಕ್ಕೆಲ್ಲ ಹೋಳಿಗೆ ಊಟ ಹಾಕಿ, ಮುತ್ತೈದೆಯರಿಗೆ ಮಡಿಲು ತುಂಬಿರುವ ವೀಡಿಯೋವನ್ನು ನೋಡಿದೆ, ಆ ತಾಯಿ ಸಿದ್ದರಾಮಯ್ಯನಿಗೆ ಒಳಿತಾಗಲೆಂದು ಇದನ್ನು ಮಾಡುತ್ತಿದ್ದೇನೆಂದು ಹೇಳಿದ್ದು ಕೇಳಿ ಮನಸ್ಸು ತುಂಬಿಬಂತು. ಇಂತಹ ಲಕ್ಷಾಂತರ ತಾಯಂದಿರ, ಅಕ್ಕ ತಂಗಿಯರ ಆಶೀರ್ವಾದ, ಹಾರೈಕೆ ನನ್ನ ಜೊತೆಗಿದೆ. ಈ ಪ್ರೀತಿ, ಅಕ್ಕರೆಗಳೇ ನನ್ನ ಬಲ ಎಂದು ಧನ್ಯತಾ ಮಾತುಗಳನ್ನಾಡಿದ್ದಾರೆ.

ʼಗೃಹಲಕ್ಷ್ಮಿ ಯೋಜನೆ ನಿಲ್ಲಬಾರದು, ಇದು ಇನ್ನಷ್ಟು ಬಡವರ ಹೊಟ್ಟೆತುಂಬಿಸಲಿ ಎಂದು ಅಕ್ಕಾತಾಯಿ ಲಂಗೂಟಿ ಅವರು ಮನವಿ ಮಾಡಿದ್ದಾರೆ, ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವುದಿಲ್ಲ, ನಮ್ಮ ಸರ್ಕಾರ ಇರುವವರೆಗೆ ಗೃಹಲಕ್ಷ್ಮಿಯ ಹಣ ಬಡವರ ಮನೆ ಸೇರುತ್ತದೆ ಎಂಬುದನ್ನು ಈ ಮೂಲಕ ಆ ಹಿರಿಯ ಜೀವಕ್ಕೆ ಮಾತ್ರವಲ್ಲ ನಾಡಿನ ಪ್ರತಿಯೊಬ್ಬರಿಗೂ ಖಾತ್ರಿಪಡಿಸುತ್ತಿದ್ದೇನೆ ಎಂದು ವಾಗ್ದಾನ ನೀಡಿದ್ದಾರೆ.

ಅಜ್ಜಿಗೆ ಮನವಿ ಮಾಡಿದ ಸಿಎಂ: ಸಿದ್ದರಾಮಯ್ಯ ಅವರು ಹೋಳಿಗೆ ಊಟ ಹಾಕಿರುವ ವೃದ್ಧೆಗೆ ಒಂದು ಮನವಿ ಮಾಡಿಕೊಂಡಿದ್ದಾರೆ. ʼನಮ್ಮ ಮಣ್ಣಿನ ಗುಣವೇ ಹಾಗೆ, ತನಗೆ ಸಿಕ್ಕಿದ್ದನ್ನು ಹಂಚಿ ತಿನ್ನುವ ಔದಾರ್ಯ, ಇನ್ನೊಬ್ಬರ ಒಳಿತು ಬಯಸುವ ನಿಸ್ವಾರ್ಥ ಭಾವವಿದೆ.

ಇಂತಹವರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯವೇ ಸರಿ. ಹೀಗಿದ್ದರೂ ಅಕ್ಕಾತಾಯಿ ಲಗೋಟಿ ಅವರಲ್ಲಿ ಒಂದು ಸವಿನಯ ವಿನಂತಿ ಇದೆ. ಊರಿಗೆ ಹೋಳಿಗೆ ಊಟ ಹಾಕುವುದು ಒಳ್ಳೆಯ ಗುಣವೇ ಸರಿ. ಆದರೆ ಗೃಹಲಕ್ಷ್ಮಿ ಯೋಜನೆಯ ಹಣದ ಮೇಲಿನ ಮೊದಲ ಹಕ್ಕು ಸ್ವಂತ ಕುಟುಂಬದ್ದು.

 

 

ಅಕ್ಕಾತಾಯಿಯಂತಹ ಒಳ್ಳೆಯ ಮನಸ್ಸಿನ ಸೋದರಿಯರು ಈ ಹಣವನ್ನು ಮೊದಲು ತಮ್ಮ ಕುಟುಂಬದ ಸದಸ್ಯರಿಗೆ ಆರೋಗ್ಯಕರವಾದ ಊಟ-ತಿಂಡಿ ಮತ್ತು ಮಕ್ಕಳ ಶಿಕ್ಷಣ ನೀಡಲು ಬಳಸಿದಾಗ ಮಾತ್ರ ಯೋಜನೆಯ ಉದ್ದೇಶ ಈಡೇರಿದಂತಾಗುತ್ತದೆ ಎಂದು ವಿನಂತಿಸಿಕೊಂಡಿದ್ದಾರೆ.

ಅಜ್ಜಿಯು ತನ್ನ ಊರಿನವರನ್ನು ಮನೆಗೆ ಕರೆಸಿಕೊಂಡು ಹೋಳಿಗೆ ಉಣಬಡಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡುತ್ತಿರುವ ಗೃಹಲಕ್ಷ್ಮಿ ಹಣದಿಂದ ನಮಗೆಲ್ಲ ಬಹಳ ಅನುಕೂಲವಾಗುತ್ತಿದೆ. ಅವರು ತಮ್ಮ ರಾಜಕೀಯ ಜೀವನದಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯಬೇಕು. ಈ ಕಾರಣಕ್ಕಾಗಿ ದೇವರಲ್ಲಿ ಪ್ರಾರ್ಥಿಸಿಕೊಂಡು, ನಮ್ಮ ಊರಿನವರಿಗೆ ಸಿಹಿ ಊಟ ಹಾಕಿಸಿದ್ದೇನೆ ಎಂದು ಅಜ್ಜಿ ಸಂತಸ ವ್ಯಕ್ತಪಡಿಸಿದ್ದರು.


Spread the love

About Laxminews 24x7

Check Also

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಯೋಜನೆಗಳ ಅವಲೋಕನ

Spread the love ಸುಬ್ರಹ್ಮಣ್ಯ, ದಕ್ಷಿಣ ಕನ್ನಡ: ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ