Breaking News

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ: ಕೃಷ್ಣಾ ನದಿ ನೀರಿನ ಮಟ್ಟ ದಿಢೀರ್‌ ಏರಿಕೆ

Spread the love

ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಹಾಗೂ ಜಿಲ್ಲೆಯ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ, ದೂಧಗಂಗಾ ನದಿಯ ಮಲಿಕವಾಡ- ದತ್ತವಾಡ ಸೇತುವೆ ಸೋಮವಾರ ಜಲಾವೃತಗೊಂಡಿದೆ.

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ರಾಜಾಪೂರ ಬ್ಯಾರೇಜಿನಿಂದ ಕೃಷ್ಣಾ ನದಿಗೆ 47,250 ಕ್ಯುಸೆಕ್ ಹೊರ ಹರಿವು ಇದೆ.

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ: ಕೃಷ್ಣಾ ನದಿ ನೀರಿನ ಮಟ್ಟ ದಿಢೀರ್‌ ಏರಿಕೆ

ದೂಧಗಂಗಾ ನದಿಗೆ 15,840 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ-ಯಡೂರ ಬ್ಯಾರೇಜ್ ಬಳಿಯಲ್ಲಿ ಕೃಷ್ಣಾ ನದಿಗೆ 63,090 ಕ್ಯುಸೆಕ್ ನೀರು ಹರಿದು ಬರುತ್ತಿದೆ.

ಕೃಷ್ಣಾ, ದೂಧಗಂಗಾ ಹಾಗೂ ವೇದಗಂಗಾ ನದಿಗಳ ನೀರಿನ ಮಟ್ಟ ಸೋಮವಾರ ದಿಢೀರ್‌ ಏರಿಕೆಯಾಗಿದ್ದು, ನದಿ ತೀರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.


Spread the love

About Laxminews 24x7

Check Also

ಪಿಜಿ-ನೀಟ್ ದೇಶಕ್ಕೆ 9ನೇ RANK ಗಳಿಸಿದDr.ಶರಣಪ್ಪ

Spread the loveಪಿಜಿ-ನೀಟ್ ದೇಶಕ್ಕೆ 9ನೇ ರ‌್ಯಾಂಕ್ ಗಳಿಸಿದ ಡಾ.ಶರಣಪ್ಪ ಬಿಮ್ಸ್ ಮುಕುಟಕ್ಕೆ ಮತ್ತೊಂದು ಗರಿ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ