ಬೆಳಗಾವಿ: ‘ಕೊಲೆ ಆರೋಪಿ, ನಟ ದರ್ಶನ್ ಅವರನ್ನು ಪರಪ್ಪನ ಅಗ್ರಹಾರದಿಂದ ಬೇರೆಡೆ ಸ್ಥಳಾಂತರಿಸುವ ಆಲೋಚನೆ ನಡೆದಿದೆ. ಅಧಿಕಾರಿಗಳ ಮಟ್ಟದಲ್ಲಿ ನಿರ್ಧಾರ ಮಾಡುತ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸಮೀಪದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಬೇಕೋ, ಬೇರೆಡೆ ಕಳಿಸಬೇಕೋ ಎಂಬುದನ್ನು ಇನ್ನೂ ನಿರ್ಧರಿಸಿಲ್ಲ’ ಎಂದರು.
‘ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿದ ವಿಚಾರವಾಗಿ ಏಳು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಗೃಹಸಚಿವ ಡಾ.ಜಿ.ಪರಮೇಶ್ವರ ಅವರು ಖುದ್ದು ಪರಿಶೀಲನೆ ನಡೆಸಲಿದ್ದಾರೆ. ಇನ್ನೂ ಯಾರ್‍ಯಾರ ಮೇಲೆ ಕ್ರಮ ಜರುಗಿಸಬೇಕೋ ಅದನ್ನು ಮಾಡುತ್ತೇವೆ’ ಎಂದರು.
Laxmi News 24×7