ಮುಧೋಳ: ಮುಧೋಳ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಗರಸಭೆ ಸಭಾಭವನದಲ್ಲಿ ಜಮಖಂಡಿ ಉಪವಿಭಾಗಧಿಕಾರಿಗಳು ಶ್ವೇತಾ ಬೀಡಿಕರ ನೇತೃತ್ವದಲ್ಲಿ ಚುನಾವಣೆ ನಡೆಯಿತು.
ಕಾಂಗ್ರೆಸ್ ಪಕ್ಷದ ವಾರ್ಡ್ ನಂ 30 ಸದಸ್ಯೆ ಸುನಂದಾ ಹನಮಂತ ತೇಲಿ 17 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರು.
ವಾರ್ಡ್ ನಂ 3 ರ ಪಕ್ಷೇತರ ಸದಸ್ಯ ಮಹಿಬೂಬ್ ಮುಕ್ತುಮಸಾಬ್ ಬಾಗವಾನ್ 17 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಆಯ್ಕೆಯಾದರು.
ನಾಮಪತ್ರ ಪರಿಶೀಲನೆ ಹಾಗೂ ಹಿಂಪಡೆಯಲು ಅವಕಾಶ ನೀಡಿ ನಂತರ ಕೈ ಎತ್ತುವ ಮೂಲಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಆಯ್ಕೆ ಪ್ರಕ್ರಿಯೆ ನಡೆಯಿತು. ಚುನಾವಣೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಾಗೂ ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ ಭಾಗವಹಿಸಿದ್ದರು.
31 ಸದಸ್ಯರ ನಗರಸಭೆಯಲ್ಲಿ ಬಿಜೆಪಿ ಬೆಂಬಲಿತ 16 ಸದಸ್ಯರು ಹಾಗೂ ಸಂಸದರು ಸೇರಿ ಒಟ್ಟು 17 ಜನರು ಹಾಗೂ ಕಾಂಗ್ರೆಸ್ ಬೆಂಬಲಿತ 14 ಸದಸ್ಯರು ಹಾಗೂ ಶಾಸಕರು ಸೇರಿ ಒಟ್ಟು 15 ಸದಸ್ಯರು, ಓರ್ವ ಪಕ್ಷೇತರ ಸದಸ್ಯರು ಸೇರಿ 33 ಸದಸ್ಯರು ಇದ್ದರು.