Breaking News

ರಥದ ಕಳಸ ಬಿದ್ದು ಬಾಲಕ ಸಾವು

Spread the love

ಚಡಿ: ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದಲ್ಲಿ ಸೋಮವಾರ, ರಥೋತ್ಸವ ವೇಳೆ ರಥದ ಮೇಲಿನ ಬೆಳ್ಳಿಯ ನವಿಲು ಬಿದ್ದು ಶಿವಾನಂದ ರಾಜಕುಮಾರ ಸಾವಳಗಿ (13) ಎಂಬ ಬಾಲಕ ಮೃತಪಟ್ಟಿದ್ದಾನೆ.

ಪ್ರತಿ ವರ್ಷದ ವಾಡಿಕೆಯಂತೆ ಶ್ರಾವಣದ ಪ್ರಯುಕ್ತ ಸಂಗಮೇಶ್ವರ ರಥೋತ್ಸವಕ್ಕೆ ಸಿದ್ಧತೆಯಾಗಿತ್ತು.

30 ಅಡಿ ಎತ್ತರದ ರಥದ ಮೇಲಿನ ಕಳಸದ ಮೇಲೆ 5 ಕೆಜಿ ತೂಕದ ಬೆಳ್ಳಿಯ ನವಿಲು ಪ್ರತಿಷ್ಠಾಪಿಸಲಾಗಿತ್ತು. ಸಾವಿರ ವರ್ಷಗಳ ಇತಿಹಾಸಯುಳ್ಳ ಈ ಜಾತ್ರೆಯಲ್ಲಿ ಇದೇ ಮೊದಲ ಸಲ ಬೆಳ್ಳಿಯ ನವಿಲು ಪ್ರತಿಷ್ಠಾಪಿಸಲಾಗಿತ್ತು.

‘ರಥ ಸಂಚರಿಸಬೇಕಾದ ರಸ್ತೆ ಸಂಪೂರ್ಣ ತಗ್ಗು-ದಿನ್ನೆಗಳಿಂದ ಕೂಡಿದೆ. ದೇವಸ್ಥಾನದಿಂದ ತುಸು ದೂರ ಎಳೆದುಕೊಂಡು ತಂದ ಬಳಿಕ ರಥದ ಚಕ್ರಗಳು ತಗ್ಗಿನಲ್ಲಿ ಸಿಲುಕಿದವು. ಜನರು ಜೋರಾಗಿ ರಥ ಎಳೆದಾಗ, ಅತ್ತಿತ್ತ ಹೊರಳಾಡಿತು. ಆಗ ಕಳಸದ ಮೇಲಿನ ಬೆಳ್ಳಿಯ ನವಿಲು ಕಿತ್ತು ಕೆಳಗಡೆ ಇದ್ದ ಬಾಲಕನ ಮೇಲೆ ಬಿತ್ತು. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಬಾಲಕ ಕೊನೆಯುಸಿರೆಳೆದಿದ್ದಾನೆ’ ಎಂದು ಮೂಲಗಳು ತಿಳಿಸಿವೆ.

ರಥೋತ್ಸವವನ್ನು ಅರ್ಧಕ್ಕೆ ನಿಲ್ಲಿಸಲಾಯಿತು ಎಂದು ಗ್ರಾಮದ ಮುಖಂಡರು ತಿಳಿಸಿದರು.


Spread the love

About Laxminews 24x7

Check Also

ಚಿಕ್ಕೋಡಿ ನಗರದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ನೆರವೇರಿಸಿದರು.

Spread the love ಚಿಕ್ಕೋಡಿ ನಗರದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು 79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ಸಂಸದೆ ಪ್ರಿಯಾಂಕಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ