Breaking News

ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ

Spread the love

ಮುಂಬೈ : ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಸೋಮವಾರ ಮಹಿಳೆ ತನ್ನ ಮನೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರತ್ನಗಿರಿಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸಿಂಗ್ ಓದುತ್ತಿರುವ ವಿದ್ಯಾರ್ಥಿನಿಗೆ ಆಟೋ ರಿಕ್ಷಾ ಚಾಲಕ ತನ್ನ ನೀರಿನಲ್ಲಿ ಮತ್ತು ಬೆರೆಸಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿದ್ದಾರೆ.

ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಆಟೋ ಚಾಲಕನಿಂದ ಅತ್ಯಾಚಾರ ! `CCTV'ಯಲ್ಲಿ ದೃಶ್ಯ ಸೆರೆ

ಪೊಲೀಸರ ಪ್ರಕಾರ, ಆಟೋ ರಿಕ್ಷಾದಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ, ವಿದ್ಯಾರ್ಥಿನಿ ಚಾಲಕನಿಂದ ನೀರು ಕೇಳಿದಳು. ಆರೋಪಿ ನೀರಿನಲ್ಲಿ ಸ್ವಲ್ಪ ಅಮಲು ಬೆರೆಸಿ ಕುಡಿಸಿದ್ದ. ಬಳಿಕ ವಿದ್ಯಾರ್ಥಿನಿ ಪ್ರಜ್ಞಾಹೀನಳಾದಾಗ ಚಾಲಕ ಆಕೆಯನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ವಿದ್ಯಾರ್ಥಿನಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿ ಚಾಲಕ ತಲೆಮರೆಸಿಕೊಂಡಿದ್ದಾನೆ.

ರತ್ನಗಿರಿ ಅತ್ಯಾಚಾರ ಪ್ರಕರಣದಲ್ಲಿ ಎಫ್‌ಐಆರ್ ದಾಖಲು, ಪ್ರತಿಭಟನೆಗಳು ಈ ವಿಷಯದಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64 (1) ಅಡಿಯಲ್ಲಿ ರತ್ನಗಿರಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ತನಿಖೆಯನ್ನು ಪ್ರಾರಂಭಿಸಲಾಗಿದೆ. ದೂರಿನ ಪ್ರಕಾರ ಚಂಪಕ್ ಮೈದಾನದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾ


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ