Breaking News

‘DYSP’ ಎಂ.ಕೆ ಗಣಪತಿ ಆತ್ಮಹತ್ಯೆ ಕೇಸ್ : ಇಂಧನ ಸಚಿವ ಕೆಜೆ ಜಾರ್ಜ್ ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್

Spread the love

ಬೆಂಗಳೂರು : ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆಜೆ ಜಾರ್ಜ್ ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ.

ಹೌದು ಡಿವೈಎಸ್ಪಿ ಎಂ ಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪ್ರಕರಣದಲ್ಲಿ ಕೆಜೆ ಜಾರ್ಜ್ ಅವರ ಪಾತ್ರ ಇಲ್ಲ ಎಂದು ಆದೇಶ ನೀಡಿದ್ದು, ಹೈಕೋರ್ಟ್ ಆದೇಶದ ವಿರುದ್ಧ ಎಂ ಕೆ ಗಣಪತಿ ಅವರ ಸಹೋದರಿ ಸವಿತಾ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

BREAKING : 'DYSP' ಎಂ.ಕೆ ಗಣಪತಿ ಆತ್ಮಹತ್ಯೆ ಕೇಸ್ : ಇಂಧನ ಸಚಿವ ಕೆಜೆ ಜಾರ್ಜ್ ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಕರ್ನಾಟಕ ಹೈಕೋರ್ಟ್ ನೀಡಿದ ಆದೇಶವನ್ನು ಎತ್ತಿ ಹಿಡಿದಿದೆ ಈ ಮೂಲಕ ಇಂಧನ ಸಚಿವ ಕೆಜೆ ಚಾರ್ಜ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಪ್ರಕರಣದಲ್ಲಿ ಕೆಜೆ ಜಾರ್ಜ್ ಅವರ ಪಾತ್ರವಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದ್ದು, ಈ ಕುರಿತು ಸಿಬಿಐ ಸಿಐಡಿ ತನಿಖಾ ತಂಡಗಳು ಬಿ ರಿಪೋರ್ಟ್ ಸಲ್ಲಿಸಿದ್ದವು. ಜಾರ್ಜ್ ಅವರ ಪಾತ್ರವಿಲ್ಲ ಎಂದು ತನಿಖಾ ವರದಿಯಲ್ಲಿ ಹೇಳಿದ್ದವು. ಇದನ್ನು ಪ್ರಶ್ನಿಸಿ ಎಂ ಕೆ ಗಣಪತಿ ಸಹೋದರಿ ಸವಿತಾ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ಬಳಿಕ ಸುಪ್ರೀಂ ಕೋರ್ಟ್ ಅರ್ಜಿ ವಜಾ ಮಾಡಿ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ.

ಪ್ರಕರಣದ ಹಿನ್ನೆಲೆ?

ಎಂಕೆ ಗಣಪತಿ ಅವರು ಮಂಗಳೂರಿನ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಾಗ ಜುಲೈ 7, 2016 ರಂದು ಕೊಡಗಿನ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ವಿಡಿಯೊ ಸಂದೇಶದಲ್ಲಿ ಅವರು ಕೆಜೆ ಜಾರ್ಜ್, ಎಎಂ ಪ್ರಸಾದ್ ಮತ್ತು ಪ್ರಣಬ್ ಮೊಹಾಂತಿ ಅವರ ತೀವ್ರ ಹೆಜ್ಜೆಗೆ ಕಾರಣರಾಗಿದ್ದಾರೆ ಎಂದು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದರು.


Spread the love

About Laxminews 24x7

Check Also

ಒಂದು ದೇಶ, ಒಂದು ಚುನಾವಣೆ’ ಜಾರಿಗೆ ಕೇಂದ್ರ ಸರ್ಕಾರ ಸಿದ್ಧತೆ, ಮೋದಿ ಸಂಪುಟ ಅನುಮೋದನೆ

Spread the loveನವದೆಹಲಿ: ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಿರುವ ಒನ್ ನೇಷನ್-ಒನ್ ಎಲೆಕ್ಷನ್ (One Nation One Election) ಮಸೂದೆಗೆ ಕೇಂದ್ರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ