Breaking News

ಕುತೂಹಲ ಕೆರಳಿಸಿದೆ ಡಿಕೆಶಿ-ಎಚ್.ವಿಶ್ವನಾಥ್ ಮಾತುಕತೆ

Spread the love

ಬೆಂಗಳೂರು,ಆ.27- ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದ ಕಿಡಿ ಹೊತ್ತಿಸಿದ ಬಿಜೆಪಿಯ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಕುತೂಹಲ ಕೆರಳಿಸಿದೆ.

ಕುತೂಹಲ ಕೆರಳಿಸಿದೆ ಡಿಕೆಶಿ-ಎಚ್.ವಿಶ್ವನಾಥ್ ಮಾತುಕತೆ

ಎಸ್.ಆರ್.ವಿಶ್ವನಾಥ್ ಅವರು ತಮ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಉಪಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಅತ್ತ ಎಚ್.ವಿಶ್ವನಾಥ್ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿರುದ್ದ ಡಿ.ಕೆ.ಶಿವಕುಮಾರ್ ಮನೆಯ ಎದುರೇ ವಾಗ್ದಾಳಿ ನಡೆಸಿದ್ದಾರೆ.

ಈ ಹಿಂದೆ ಮುಡಾದಲ್ಲಿ ನಿವೇಶನ ಹಂಚಿಕೆಗೆ ಸಂಬಂಧಪಟ್ಟಂತೆ ಕಳೆದ ಎರಡು ವರ್ಷಗಳ ಹಿಂದಿನ ಪ್ರಕರಣವನ್ನು ಎಚ್.ವಿಶ್ವನಾಥ್ ಕೆದಕಿದರು. ಲೋಕಸಭೆ ಚುನಾವಣೆಗೂ ಮುನ್ನ ಎಚ್.ವಿಶ್ವನಾಥ್ ಬಿಜೆಪಿ ಮುಖಂಡರ ವಿರುದ್ಧವೇ ಕೆಂಡಕಾರಿ ಕಾಂಗ್ರೆಸ್ ನಾಯಕರ ಪರವಾಗಿ ಮಾತನಾಡಿದ್ದರು. ಆ ಸಂದರ್ಭದಲ್ಲಿ ವಿಶ್ವನಾಥ್ ಮರಳಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳು ಹರಡಿದ್ದವು.


Spread the love

About Laxminews 24x7

Check Also

ಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

Spread the loveಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ! ಬಾಗಲಕೋಟೆ ಜಿಲ್ಲೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ