ಅಕ್ಟೋಬರ್ 3ರಿಂದ ಆರಂಭವಾಗಲಿರುವ ಮಹಿಳಾ ಟಿ20 ವಿಶ್ವಕಪ್‌ಗೆ ಬಿಸಿಸಿಐ ಭಾರತ ತಂಡವನ್ನು ಆಯ್ಕೆ ಮಾಡಿದೆ. ಬಾಂಗ್ಲಾದೇಶದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಪಂದ್ಯಾವಳಿ ಅಲ್ಲಿ ದಂಗೆ ಶುರುವಾದ ಬಳಿಕ, ಯುಎಇಗೆ ಸ್ಥಳಾಂತರ ಮಾಡಿದೆ. ಭಾರತ ಬಲಿಷ್ಠ ತಂಡವನ್ನು ಆಯ್ಕೆ ಮಾಡಿದ್ದು, ಈ ಬಾರಿ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿದೆ.
ಕನ್ನಡತಿ ಶ್ರೇಯಾಂಕಾ ಪಾಟೀಲ್ ಕೂಡ ಟಿ20 ವಿಶ್ವಕಪ್‌ನಲ್ಲಿ ಮಿಂಚಲು ಸಜ್ಜಾಗಿದ್ದಾರೆ.
ಹರ್ಮನ್‌ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದಾರೆ. ಸ್ಮೃತಿ ಮಂದಾನಗೆ ತಂಡದ ಉಪನಾಯಕಿ ಪಟ್ಟ ನೀಡಲಾಗಿದೆ. ಆರ್ ಸಿಬಿ ಸ್ಟಾರ್ ಆಟಗಾರ್ತಿ, ಕರ್ನಾಟಕದ ಶ್ರೇಯಾಂಕಾ ಪಾಟೀಲ್ ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ, ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಅವರು ತಂಡದಲ್ಲಿ ಅವಕಾಶ ಪಡೆಯಲು ಪಂದ್ಯಾವಳಿಗೆ ಮುನ್ನ ಸಂಪೂರ್ಣವಾಗಿ ಫಿಟ್ ಆಗಬೇಕಿದೆ.
ಟಿ20 ವಿಶ್ವಕಪ್‌ಗೆ ಭಾರತ ತಂಡ
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯಾದವ್, ಶ್ರೇಯಾಂಕಾ ಪಾಟೀಲ್, ಸಜನಾ ಸಜೀವನ್.
ತಂಡದ ಜೊತೆ ಪ್ರಯಾಣ ಮಾಡಲಿರುವ ಮೀಸಲು ಆಟಗಾರರು: ಉಮಾ ಚೆಟ್ರಿ, ತನನುಜಾ ತನುಜಾ ಕನ್ವರ್, ಸೈಮಾ ಠಾಕೋರ್.