Breaking News

ದಲಿತ ಯುವಕನ ಕೊಲೆ: ಸಿಪಿಐ(ಎಂ) ಖಂಡನೆ

Spread the love

ರಾಮದುರ್ಗ: ಕ್ಷೌರ ಮಾಡುವ ವಿಚಾರದಲ್ಲಿ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕಿನ ಸಂಗನಾಳ ಗ್ರಾಮದಲ್ಲಿ ನಡೆದಿರುವ ಪರಿಶಿಷ್ಟ ಜಾತಿ ಯುವಕ ಯಮನೂರಪ್ಪ ಅವರ ಕೊಲೆ ಪ್ರಕರಣವನ್ನು ಖಂಡಿಸಿ ಸಿಪಿಐ(ಎಂ) ಪಕ್ಷದ ಕಾರ್ಯಕರ್ತರು ಪ್ರತಿಭಟಿಸಿ ತಹಶೀಲ್ದಾರ್‌ ಕಚೇರಿಗೆ ಸೋಮವಾರ ಮನವಿ ಸಲ್ಲಿಸಿದರು.

 

ಈ ಕೊಲೆ ಪ್ರಕರಣವು ಜಾತಿ, ದೌರ್ಜನ್ಯ ಹಾಗೂ ಅಸ್ಪೃಶ್ಯತೆಗೆ ಕರಾಳ ಕಾರ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಘಟನೆಯನ್ನು ಖಂಡಿಸಿದರು.

ಕೊಲೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಕೊಲೆಗೀಡಾದವರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಜಿ.ಎಂ. ಜೈನೆಖಾನ್, ಮುಖಂಡ ನಾಗಪ್ಪ ಸಂಗೊಳ್ಳಿ, ತುಳಸಮ್ಮ ಮಾಳದಕರ, ಮೀನಾಕ್ಷಿ ಸಂಶಿ, ರಾಚವ್ವ ರಾಮದುರ್ಗ, ಫಾರೂಖ್ ಶೇಖ್ ಮತ್ತಿತರರು ಇದ್ದರು.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ