Breaking News

ವಾಲ್ಮೀಕಿ ಹಗರಣ : ಇಂದು ರಾಯಚೂರು, ಬಳ್ಳಾರಿ, ಕೊಪ್ಪಳದಲ್ಲಿ ಮತ್ತೆ ‘ED’ ರೇಡ್!

Spread the love

ಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ,ಇದೀಗ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬಳ್ಳಾರಿ ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಮತ್ತೆ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಆಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಚಿವ ಬಿ.

ನಾಗೇಂದ್ರ ಅವರ ಆಪ್ತರು ಹಾಗೂ ಸಂಬಂಧಿಕರ ಮನೆ ಕಚೇರಿ ಸೇರಿದಂತೆ ವಿವಿದೇಡೆ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದರು.

ಬಳ್ಳಾರಿಯ ವಿವಿಧೆಡೆ ಮಾಜಿ ಸಚಿವ ನಾಗೇಂದ್ರ ಆಪ್ತರ ಮನೆ ಮೇಲೆ ದಾಳಿ ನಡೆದಿದೆ. ಆಪ್ತ ನಾಗೇಂದ್ರ ಸಂಬಂಧಿ ನಿವಾಸ ಸೇರಿದಂತೆ, ಕೆಲ ಆಪ್ತ ಸಹಾಯಕರು ಮತ್ತು ಆಪ್ತರ ಮನೆಗಳಲ್ಲಿ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣ ಸಂಬಂಧ ಚಾರ್ಜ್​​ ಶೀಟ್ ಸಲ್ಲಿಕೆಗೂ ಇಡಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.BREAKING : ವಾಲ್ಮೀಕಿ ಹಗರಣ : ಇಂದು ರಾಯಚೂರು, ಬಳ್ಳಾರಿ, ಕೊಪ್ಪಳದಲ್ಲಿ ಮತ್ತೆ 'ED' ರೇಡ್!

ಜುಲೈ 12ರಂದು ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಾಗೇಂದ್ರ ಅವರನ್ನು ಜುಲೈ 18ರ ವರೆಗೆ ಇಡಿ ಕಸ್ಟಡಿಗೆ ಒಪ್ಪಿಸಿತ್ತು. ತದನಂತರ, ಇಡಿ ಅಧಿಕಾರಿಗಳ ಮನವಿಯ ಮೇರೆಗೆ ಜುಲೈ 22ರ ವರೆಗೆ ಕಸ್ಟಡಿ ಅವಧಿ ವಿಸ್ತರಿಸಲಾಗಿತ್ತು. ಆ ಬಳಿಕ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ