Breaking News

4 ತಿಂಗಳ ನಂತರ ಆಸ್ಪತ್ರೆಯಿಂದ ಎಸ್.ಎಂ.ಕೃಷ್ಣ ಡಿಸ್ಚಾರ್ಜ್!

Spread the love

ಬೆಂಗಳೂರು: ಶ್ವಾಸಕೋಶ ಸಮಸ್ಯೆಯಿಂದ (Lung problem) ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್.ಎಂ.ಕೃಷ್ಣ (SM Krishna) ಅವರ ಆರೋಗ್ಯ ಸುಧಾರಿಸಿದ್ದು ವೈದ್ಯರ (Doctor) ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮರಳಿ ಮನೆಗೆ ಆಗಮಿಸಿದ್ದಾರೆ ಎಂದು ವಿಧಾನ ಪರಿಷತ್​ ಸದಸ್ಯ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.

 

ಕೃಷ್ಣ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು ಶ್ವಾಸಕೋಶದ ಸೊಂಕು‌ ನಿವಾರಣೆ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿರುವುದಾಗಿ ಮಣಿಪಾಲ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಭಗವಂತನ ಕೃಪೆ ಮತ್ತು ವೈದ್ಯರ ಪರಿಶ್ರಮದಿಂದ ಎಸ್.ಎಂ.ಕೃಷ್ಣ ಅವರು ಗುಣಮುಖರಾಗಿದ್ದಾರೆ. ಆದರೆ ಎರಡು ವಾರಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದು ಯಾವುದೆ‌ ಸಾರ್ವಜನಿಕ ಭೇಟಿ ಮತ್ತು ‌ಕಾರ್ಯಕ್ರಮಗಳಿಗೆ ಪಾಲ್ಗೊಳ್ಳದಂತೆ ವೈದ್ಯರು‌ ಸೂಚಿಸಿದ್ದಾರೆ.

ಕೆಲದಿನಗಳ ಕಾಲ ಭೇಟಿಗೆ ಬರೋದು ಬೇಡ

ಈ ಹಿನ್ನೆಲೆಯಲ್ಲಿ ಅವರ ಹಿತೈಷಿಗಳು, ಅಭಿಮಾನಿಗಳು ಕೆಲವು ದಿನಗಳ ಕಾಲ ಅವರನ್ನು ಭೇಟಿ ಮಾಡದಂತೆ ಕುಟುಂಬ ವರ್ಗದವರಿಗೆ ವೈದ್ಯರು ತಿಳಿಸಿದ್ದು ಹೀಗಾಗಿ ಯಾರೂ ಸಹ ಅನ್ಯತಃ ಭಾವಿಸದೇ ಹಿರಿಯ ಮುತ್ಸುದ್ದಿ ಎಸ್.ಎಂ.ಕೃಷ್ಣ. ಅವರು ವಿಶ್ರಾಂತಿ ಪಡೆಯಲು ಸಹಕರಿಸಬೇಕಾಗಿದೆ ಹಾಗೂ ಸಂಪೂರ್ಣವಾಗಿ ಗುಣಮುಖರಾದ ನಂತರ ಎಸ್.ಎಂ.ಕೃಷ್ಣ ಅವರೇ ಎಲ್ಲರನ್ನೂ ಭೇಟಿ ಮಾಡಲಿದ್ದಾರೆ. ಚಿಕಿತ್ಸೆ ನೀಡಿದ ಮಣಿಪಾಲ ವೈದ್ಯರ ತಂಡ ಹಾಗೂ ಸಿಬ್ಬಂದಿಗೆ ಎಸ್.ಎಂ.ಕೃಷ್ಣ ಅವರು ಧನ್ಯವಾದ ತಿಳಿಸಿದ್ದಾರೆ ಎಂದು ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ

Spread the love ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ ಖಾನಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ