ಒಂದು ಕ್ಷೇತ್ರದ ಬಿಜೆಪಿ ಟಿಕೆಟ್‌ಗೆ ನಾಲ್ವರು ಘಟಾನುಘಟಿ ನಾಯಕರ ಪೈಪೋಟಿ!
ನವದೆಹಲಿ, ಆಗಸ್ಟ್ 28: ಹರ್ಯಾಣ ವಿಧಾನಸಭೆ ಚುನಾವಣೆ 2024ರ ದಿನಾಂಕ ಘೋಷಣೆಯಾಗಿದೆ. 90 ಸದಸ್ಯ ಬಲದ ವಿಧಾನಸಭೆಗೆ ಒಂದೇ ಹಂತದಲ್ಲಿ 1/10/2024ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಸರತ್ತು ಆರಂಭಿಸಿದೆ.
ಇಂತಹ ಸಂದರ್ಭದಲ್ಲಿ ಒಂದೇ ಕ್ಷೇತ್ರದ ಟಿಕೆಟ್‌ಗಾಗಿ ಘಟಾನುಘಟಿ ನಾಯಕರು ಪೈಪೋಟಿ ನಡೆಸುತ್ತಿರುವುದು ಪಕ್ಷದ ಚಿಂತೆ ಹೆಚ್ಚಿಸಿದೆ.
ಬಾದಶಹಪುರ ಹರ್ಯಾಣ ರಾಜ್ಯದ ಒಂದು ವಿಧಾನಸಭಾ ಕ್ಷೇತ್ರ. ರಾಜ್ಯದಲ್ಲಿ ಅತಿ ಹೆಚ್ಚು ಮತದಾರರು ಇರುವ ಕ್ಷೇತ್ರವಿದು. 4.5 ಲಕ್ಷ ಮತದಾರರು ಈ ಕ್ಷೇತ್ರದಲ್ಲಿ ಇದ್ದಾರೆ. ಕ್ಷೇತ್ರದ ಟಿಕೆಟ್ ಪಡೆಯಲು ಮಾಜಿ ಸಿಎಂ ಆಪ್ತ ಸೇರಿ ಹಲವು ನಾಯಕರು ಪೈಪೋಟಿಯಲ್ಲಿ ತೊಡಗಿದ್ದಾರೆ. ಟಿಕೆಟ್ ಕೈತಪ್ಪಿದರ ನಡೆ ಬಿಜೆಪಿಗೆ ತಲೆನೋವು ತಂದಿದೆ.
ಹರ್ಯಾಣ ವಿಧಾನಸಭೆ ಚುನಾವಣೆ 2024ಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಎರಡು ದಿನದಲ್ಲಿ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಆದರೆ ಇದಕ್ಕೂ ಮೊದಲು ಬಾದಶಹಪುರ ಕ್ಷೇತ್ರದ ಟಿಕೆಟ್‌ಗಾಗಿ ನಡೆಯುತ್ತಿರುವ ಪೈಪೋಟಿ ರಾಷ್ಟ್ರಮಟ್ಟದಲ್ಲಿ ಸುದ್ದಿಗೆ ಕಾರಣವಾಗಿದೆ.