Breaking News

ಸೆ.5ರಂದು ಮಹತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ ನಿಗದಿ

Spread the love

ಬೆಂಗಳೂರು: ಸಿಎಂ ವಿರುದ್ಧ ಮುಡಾ ಹಗರಣಕ್ಕೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದ ವಿಚಾರ ಸಂಬಂಧ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಲಹೆ ನೀಡುವಂತ ತೀರ್ಮಾನ, ಆ ಬಳಿಕ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಖಂಡಿಸುವಂತ ನಿರ್ಣಯ ಕೈಗೊಳ್ಳಲಾಗಿತ್ತು. ಈಗ ಸೆಪ್ಟೆಂಬರ್.5ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಮಾಡಲಾಗಿದೆ.

 

ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ 05-09-2024ರಂದು ಗುರುವಾರ ಸಂಜೆ 4 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 18ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ.

ದಿನಾಂಕ 05-09-2024ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ನೇತೃತ್ವದಲ್ಲಿ ಈ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ( Karnataka Cabinet Meeting ) ನಡೆಯಲಿದೆ. ಈ ಸಭೆಯಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ಜೊತೆಗೆ ಅನುದಾನ ಒದಗಿಸುವುದು ಸೇರಿದಂತೆ ವಿವಿಧ ನಿರ್ಣಯಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ