Breaking News

ಕಲಬುರಗಿ ಜೈಲಿಗೆ ದರ್ಶನ್ ಆಪ್ತ ನಾಗರಾಜ್

Spread the love

ಲಬುರಗಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾಗ, ನಿಯಮ ಉಲ್ಲಂಘಿಸಿ ವಿಶೇಷ ಆತಿಥ್ಯ ಪಡೆದಿದ್ದ ನಟ ದರ್ಶನ್‌ ಮ್ಯಾನೇಜರ್ ನಾಗರಾಜ್‌ ಅಲಿಯಾಸ್‌ ನಾಗನನ್ನು ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ಅಧಿಕೃತ ಆದೇಶ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

 

ಜೈಲಿನ ನಿಯಮ ಉಲ್ಲಂಘಿಸಿ ವಿಶೇಷ ಆತಿಥ್ಯ ಪಡೆದಿದ್ದ ನಟ ದರ್ಶನ್‌ ಹಾಗೂ ಆತನ ಸಹಚರರನ್ನು ರಾಜ್ಯದ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರಿಸಲು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿತ್ತು. ಅದರಂತೆ, ಕೊಲೆ ಪ್ರಕರಣದ 11ನೇ ಆರೋಪಿ ನಾಗರಾಜ್‌ನನ್ನು ಕಲಬುರಗಿ ಜೈಲಿಗೆ ಕರೆ ತರಲಾಗುತ್ತಿದೆ.

‘ನಾಗರಾಜ್‌ನನ್ನು ಕಲಬುರಗಿ ಜೈಲಿಗೆ ಗುರುವಾರ ಕರೆತರಬಹುದು ಎಂಬ ಮಾಹಿತಿ ಇದೆ. ಜೈಲಿಗೆ ತಂದ ಬಳಿಕ ಆತನನ್ನು ಸಾಮಾನ್ಯ ಕೈದಿಯಂತೆ ಪರಿಗಣಿಸುತ್ತೇವೆ. ಏಳು ದಿನ ಕ್ವಾರಂಟೈನ್‌ನಲ್ಲಿ ಇರಿಸಲಾಗುವುದು. ನಿಯಮದಂತೆ ವಾರದಲ್ಲಿ ಎರಡು ಬಾರಿ ಸಂಬಂಧಿಕರ ಸಂದರ್ಶನಕ್ಕೆ ಅವಕಾಶ ನೀಡಲಾಗುವುದು’ ಎಂದು ಕಾರಾಗೃಹದ ಮುಖ್ಯ ಅಧೀಕ್ಷಕ ಡಾ. ಪಿ. ರಂಗನಾಥ್ ‘ ತಿಳಿಸಿದರು.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ