Breaking News

ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ವಿಚಾರಣಾಧೀನ `ಕೈದಿ ನಂ. 511′ ನೀಡಿದ ಜೈಲು ಅಧಿಕಾರಿಗಳು!

Spread the love

ಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರನ್ನು ಇಂದು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಇದೀಗ ನಟ ದರ್ಶನ್ ಗೆ ಜೈಲು ಅಧಿಕಾರಿಗಳು ಕೈದಿ ನಂಬರ್ 511 ನೀಡಿದ್ದಾರೆ.

ಇಂದು ಬಳ್ಳಾರಿ ಜೈಲಿಗೆ ಪ್ರವೇಶಿಸುತ್ತಿದ್ದಂತೆ ಪೊಲೀಸರು ದರ್ಶನ್ ಹೆಸರು, ತಂದೆಯ ಹೆಸರು ಹಾಗೂ ವಿಳಾಸವನ್ನು ಜೈಲಿನ ಡೈರಿಯೊಳಗೆ ಬರೆದುಕೊಂಡಿದ್ದು, ಬಳಿಕ ಕೊರಳಿನಲ್ಲಿದ್ದ ಸರ ಹಾಗೂ ಕೈಯಲ್ಲಿದ್ದ ಬೆಳ್ಳಿ ಕಡಗವನ್ನು ತೆಗೆಸಿದ್ದಾರೆ.

ಬಳಿಕ ವಿಚಾರಣಾಧೀನ ಕೈದಿ ಸಂಖ್ಯೆ 511 ನೀಡಿದ್ದಾರೆ.

ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಯ ಕೇಂದ್ರೀಯ ಕಾರಾಗೃಹಕ್ಕೆ ಶಿಫ್ಟ್ ಮಾಡುವ ಕೆಲಸಕ್ಕೆ ಇಂದು ಬೆಳಗ್ಗೆ ಚಾಲನೆ ನೀಡಲಾಗಿತ್ತು. ಪೊಲೀಸರು ಬೆಂಗಳೂರು – ತುಮಕೂರು – ಚಳ್ಳಕೆರೆ – ಮೊಳಕಾಲ್ಮುರು – ರಾಂಪುರ ಮಾರ್ಗವಾಗಿಯೇ ಬಳ್ಳಾರಿಗೆ ಪ್ರಯಾಣಿಸಿದ್ದರು.

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರ ಹತ್ಯೆ ಕೇಸ್ ನಲ್ಲಿ ಜೂನ್ ತಿಂಗಳಲ್ಲಿ ಬಂಧನಕ್ಕೊಳಗಾಗಿದ್ದರು. ಅವರ ಜೊತೆಗೆ ಕೊಲೆಗೆ ಸಹಕರಿಸಿದ ಆರೋಪದಡಿ ದರ್ಶನ್ ಸೇರಿ ಒಟ್ಟು 17 ಆರೋಪಿಗಳ ಬಂಧನವಾಗಿದೆ. ಸದ್ಯ ದರ್ಶನ್‌ ನ್ಯಾಯಾಂಗ ಬಂಧನದಲ್ಲಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ