ಬೆಂಗಳೂರು, ಆಗಸ್ಟ್ 29: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಸುಪ್ರೀಂಕೋರ್ಟ್ ಮೆಟ್ಟಿಲೇರಲಿದ್ದಾರೆ.
ಕರ್ನಾಟಕ ಹೈಕೋರ್ಟ್ ಗುರುವಾರ ನೀಡಿರುವ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಿದ್ದು, ಡಿ.
ಕೆ. ಶಿವಕುಮಾರ್ ಕಾನೂನು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ.
ಡಿ. ಕೆ. ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದ ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಾಪಸ್ ಪಡೆಯಲಾಗಿತ್ತು.
ಸಚಿವ ಸಂಪುಟದ ಈ ತೀರ್ಮಾನವನ್ನು ಪ್ರಶ್ನಿಸಿ ಸಿಬಿಐ ಮತ್ತು ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು.
ಅರ್ಜಿಗಳ ವಿಚಾರಣೆ ನಡೆಸಿದ್ದ ಕೋರ್ಟ್ ಗುರುವಾರ ತೀರ್ಪು ಪ್ರಕಟಸಿದ್ದು, ಅರ್ಜಿಗಳನ್ನು ವಜಾ ಮಾಡಿದ ಆದೇಶ ನೀಡಿದೆ. ಬಸನಗೌಡ ಪಾಟೀಲ್ ಯತ್ನಾಳ್ ಈ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ.
Laxmi News 24×7