Breaking News

ಧಾರವಾಡ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆದ ಧನರಾಜ್

Spread the love

ಧಾರವಾಡ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy case) ಪ್ರಕರಣದ A9 ಆರೋಪಿ ಧನರಾಜ್‌ ನನ್ನು ಬೆಂಗಳೂರು ಪರಪ್ಪನ ಅಗ್ರಹಾರದಿಂದ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಬುಧವಾರ ಶಿಫ್ಟ್ ಮಾಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಅವರಿಗೆ ರಾಜಾತಿಥ್ಯ ನೀಡಿದ ಪ್ರಕರಣ ಬೆಳಕಿಗೆ ಬಂದ ನಂತರ ದರ್ಶನ್ ಸೇರಿ ಆ ತಂಡದ ಮೂವರನ್ನು ಹೊರತುಪಡಿಸಿ ಉಳಿದೆಲ್ಲಾ ಸದಸ್ಯರನ್ನು ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

 

A9 ಆರೋಪಿಯಾಗಿರುವ ಧನರಾಜ್‌ ನನ್ನು ಬೆಂಗಳೂರು ಪೊಲೀಸರು ಭದ್ರತೆ ಮಧ್ಯೆ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಿದರು. ಇದರ ಜತೆಗೆ A14 ಆರೋಪಿಯಾಗಿರುವ ಪ್ರದೂಷ್‌ ನನ್ನು ಬೆಳಗಾವಿ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಮೊದಲಿಗೆ ಧನರಾಜ್‌ ನನ್ನು ಧಾರವಾಡದ ಕಾರಾಗೃಹಕ್ಕೆ ಶಿಫ್ಟ್ ಮಾಡಿದ ಪೊಲೀಸರು ಅದೇ ವಾಹನದಲ್ಲಿ ಪ್ರದೂಷ್‌ ನನ್ನು ಬೆಳಗಾವಿ ಕಾರಾಗೃಹಕ್ಕೆ ಕರೆದೊಯ್ದರು. ಧನರಾಜ್‌ನನ್ನು ಧಾರವಾಡದ ಕಾರಾಗೃಹಕ್ಕೆ ಕರೆದುಕೊಂಡು ಬಂದ ನಂತರ ಆತನ ಬ್ಯಾಗ್‌ ಗಳನ್ನು ಪರಿಶೀಲನೆ ಮಾಡಿ ನಂತರ ಒಳಗಡೆ ಕರೆದುಕೊಂಡು ಹೋಗಲಾಯಿತು


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ