Breaking News

ಗ್ರಾಮೀಣಾಭಿವೃದ್ಧಿಯಲ್ಲಿ ರಾಜಕಾರಣ ಇಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

Spread the love

ಬೆಳಗಾವಿ: ‘ರಾಜಕೀಯ ಆರಂಭಿಸಿದ ದಿನದಿಂದಲೂ ನಾನು ದ್ವೇಷ ರಾಜಕಾರಣ ಮಾಡಿಲ್ಲ. ಅಭಿವೃದ್ಧಿ ಒಂದೇ ನಮ್ಮ ಮೂಲಮಂತ್ರ. ದ್ವೇಷ ರಾಜಕಾರಣ ನನ್ನ ಶಬ್ದಕೋಶದಲ್ಲೇ ಇಲ್ಲ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ತಾಲ್ಲೂಕಿನ ಮೋದಗಾದಲ್ಲಿ ಬುಧವಾರ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ ಹಾಗೂ ರಾಜೀವ ಗಾಂಧಿ ಸೇವಾ ಕೇಂದ್ರ ಮತ್ತು ಸಂಜೀವಿನಿ ಸೇವಾ ಕೇಂದ್ರ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಗ್ರಾಮೀಣಾಭಿವೃದ್ಧಿಯಲ್ಲಿ ರಾಜಕಾರಣ ಇಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳಕರ

‘ಭಾರತ ದೇಶ ಹಳ್ಳಿಗಳ ದೇಶ. ಹಳ್ಳಿಗಳು ಸುಧಾರಿಸಿದರೆ ದೇಶ ಸುಧಾರಿಸಿದಂತೆ. ಮಹಾತ್ಮ ಗಾಂಧಿ ಅವರ ಪರಿಕಲ್ಪನೆಯಡಿ ಗ್ರಾಮಗಳ ಅಭಿವೃದ್ದಿಗೆ ಶ್ರಮಿಸುತ್ತಿದ್ದೇನೆ’ ಎಂದರು.

‘ಗ್ರಾಮ ಪಂಚಾಯಿತಿಯಲ್ಲಿ ಮಹಿಳೆಯರೂ ಅಡಳಿತ ನಡೆಸಬೇಕು ಎಂಬ ದೃಷ್ಟಿಯಿಂದ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಮಹಿಳೆಯರಿಗೆ ಶೇ 33 ಮೀಸಲಾತಿಯನ್ನು ಜಾರಿಗೆ ತಂದರು. ಗ್ರಾಮ ಸುಧಾರಣೆಗೆ ಅವರೇ ಅಡಿಪಾಯ ಹಾಕಿದ್ದಾರೆ’ ಎಂದರು.

‘ಅಧಿಕಾರ ಇದ್ದಾಗ ಕೆಲಸ ಮಾಡೋಣ. ಜನರಿಗೆ ಸಹಾಯ ಮಾಡೋಣ. 2018ರಲ್ಲಿ ಶಾಸಕಿಯಾದ ನಂತರ ಉದ್ಯೋಗ ಖಾತ್ರಿ ಯೋಜನೆಯಲ್ಲಿ 180 ಶಾಲೆಗಳಿಗೆ ಕಾಂಪೌಂಡ್ ಹಾಕಿಸಿದ್ದೇನೆ. ಈ ರೀತಿ ಉದ್ಯೋಗ ಖಾತ್ರಿ ಯೋಜನೆಯನ್ನು ಶಾಲೆಗಳ ಕಾಂಪೌಂಡ್‌ಗೆ ಬಳಸಿದ್ದು ರಾಜ್ಯದಲ್ಲೇ ಮೊದಲು. ನಂತರ ನಮ್ಮ ಮಾದರಿ ನೋಡಿ ಬೇರೆ ಕಡೆಯೂ ಆರಂಭಿಸಿದರು’ ಎಂದರು.

‘ಮೋದಗಾದಲ್ಲಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ ಹಾಗೂ ಸೇವಾ ಕೇಂದ್ರಗಳು ಆರಂಭಗೊಂಡಿದ್ದು ಖುಷಿಯ ವಿಚಾರ‌. ಇದೀಗ ಎಲ್ಲರ ಶ್ರಮದಿಂದ ಈ ಕನಸು ನನಸಾಗಿದೆ’ ಎಂದು ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.


Spread the love

About Laxminews 24x7

Check Also

ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ!

Spread the love ಬೆಳಗಾವಿಯ ಡಾಕ್ಟರ್ ಶಿವಸ್ವಾಮಿ ಮುಡಿಗುಂಡ ಅವರಿಗೆ ‘ಕಾಚ್ ಸಮುದಾಯ ಚಾಂಪಿಯನ್ ಪ್ರಶಸ್ತಿ’ ಪ್ರದಾನ! ಸಚಿವ ಶರಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ