Breaking News

ಮಳೆಗಾಲದಲ್ಲಿ ನಗರದ ಜನತೆಗೆ ಯಾವ ಕಾರಣಕ್ಕೂ ಮಣ್ಣುಮಿಶ್ರಿತ ನೀರು ಸರಬರಾಜು ಮಾಡಬಾರದು:D.C.

Spread the love

ಬೆಳಗಾವಿ: ‘ಮಳೆಗಾಲದಲ್ಲಿ ನಗರದ ಜನತೆಗೆ ಯಾವ ಕಾರಣಕ್ಕೂ ಮಣ್ಣುಮಿಶ್ರಿತ ನೀರು ಸರಬರಾಜು ಮಾಡಬಾರದು. ಬದಲಿಗೆ, ಶುದ್ಧ ಕುಡಿಯುವ ನೀರು ಪೂರೈಕೆಗೆ ಒತ್ತು ನೀಡಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್ ಸೂಚಿಸಿದರು.

ಇಲ್ಲಿನ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ(ಕೆಯುಐಡಿಎಫ್‌ಸಿ) ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

 

‘ಈಗ ಪಾಲಿಕೆ ವ್ಯಾಪ್ತಿಯ 10 ವಾರ್ಡ್‌ಗಳಿಗೆ 24×7 ಮಾದರಿಯಲ್ಲಿ ಕುಡಿಯುವ ನೀರು ಸರಬರಾಜು ಯೋಜನೆ ಜಾರಿಯಲ್ಲಿದೆ. ಉಳಿದ ವಾರ್ಡ್‌ಗಳಿಗೆ ಯೋಜನೆ ವಿಸ್ತರಿಸುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ನೀರು ಶುದ್ಧೀಕರಣ ಘಟಕ ಹಾಗೂ ಜಲ ಸಂಗ್ರಹಾಗಾರಗಳಲ್ಲಿ ಶುಚಿತ್ವ ಕಾಪಾಡಬೇಕು’ ಎಂದು ತಾಕೀತು ಮಾಡಿದರು.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ