Breaking News

ಮುಡಾ ನಿವೇಶನ ಹಂಚಿಕೆ : ಸ್ಫೋಟಕ ಆಡಿಯೋ ಬಿಡುಗಡೆ

Spread the love

ಬೆಂಗಳೂರು,ಆ.30- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ ಅವರಿಗೆ ಬದಲಿ ನಿವೇಶನ ನೀಡುವ ನಿರ್ಣಯವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಡಳಿತ ಮಂಡಳಿ ತೆಗೆದುಕೊಂಡಿಲ್ಲ. ಆದರೂ ನಿಯಮಬಾಹಿರವಾಗಿ 14 ನಿವೇಶನಗಳನ್ನು ಪಡೆಯಲಾಗಿದೆ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ರವಿಕುಮಾರ್‌ ಗಂಭೀರ ಆರೋಪ ಮಾಡಿದ್ದು, ಆಡಿಯೋ ಸಾಕ್ಷ್ಯವನ್ನು ಬಿಡುಗಡೆ ಮಾಡಿದ್ದಾರೆ.

 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಹಲವಾರು ಮಾಹಿತಿಗಳನ್ನು ದಾಖಲೆಗಳ ಸಮೇತ ಬಿಡುಗಡೆ ಮಾಡಿದರು. ಬಿಜೆಪಿ ಸರ್ಕಾರದಲ್ಲಿ ಹಾಗೂ ಮುಡಾದಲ್ಲಿ ಬಿಜೆಪಿಯ ವ್ಯಕ್ತಿ ಅಧ್ಯಕ್ಷರಾಗಿದ್ದಾಗ ತಮಗೆ ನಿವೇಶನ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ವಾದಿಸುತ್ತಿದ್ದಾರೆ. ಇದು ಅಪ್ಪಟ ಸುಳ್ಳು. ಜಂಟಿ ಸಹಭಾಗಿತ್ವದಲ್ಲಿ ನಿವೇಶನಗಳ ಅಭಿವೃದ್ಧಿಗೆ 2009 ರಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಅದಕ್ಕೆ ಭೂಪರಿವರ್ತನೆಯಾದ ನಿವೇಶನ ಹಂಚಿಕೆಯ ಪ್ರಮಾಣ 60:40 ರಷ್ಟಿತ್ತು.

ಇದಕ್ಕೆ ಜಮೀನು ನೀಡಲು ರೈತರು ಮುಂದೆ ಬರಲಿಲ್ಲ, ಅಧಿಕಾರಿಗಳೂ ಉತ್ಸಾಹ ತೋರಲಿಲ್ಲ. ಹೀಗಾಗಿ 2015 ರಲ್ಲಿ ಈ ಪ್ರಮಾಣವನ್ನು 50:50 ರ ಅನುಪಾತಕ್ಕೆ ಮುಡಾ ಹೆಚ್ಚಿಸಿದೆ. ಆದರೆ ಈ ನಿರ್ಣಯಕ್ಕೆ ರಾಜ್ಯಸರ್ಕಾರದ ಅನುಮತಿ ದೊರೆಯಲಿಲ್ಲ. ಈ ಹಿನ್ನೆಲೆಯಲ್ಲಿ 2020ರಲ್ಲೇ ರದ್ದುಗೊಳಿಸಲಾಗಿದೆ ಎಂದು ತಿಳಿಸಿದರು. ಈ ನಿರ್ಣಯ ಸಿದ್ದರಾಮಯ್ಯ ಸೇರಿದಂತೆ ಎಲ್ಲರಿಗೂ ಅನ್ವಯವಾಗುತ್ತದೆ. ಆದಾಗ್ಯೂ ಮುಡಾ ಸಭೆಯಲ್ಲಿ ಚರ್ಚೆ ಮಾಡಿ ಭೂಸ್ವಾಧೀನ ಪ್ರಕ್ರಿಯೆಗಳು ನಡೆಯದೆ ಅನಧಿಕೃತವಾಗಿ ಭೂಮಿ ಬಳಸಿಕೊಂಡು ಬಡಾವಣೆ ನಿರ್ಮಿಸಿದ ಪ್ರಕರಣಗಳಲ್ಲಿ 50:50 ರ ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡಬೇಕು ಎಂಬ ನಿರ್ಣಯವಾಗಿಲ್ಲ.

ಇದನ್ನು ಬಳಸಿಕೊಂಡು ಸಿದ್ದರಾಮಯ್ಯನವರು ನಿವೇಶನ ಪಡೆದಿದ್ದಾರೆ. ನಕಲಿ ನಿರ್ಣಯವನ್ನು ಬಳಕೆ ಮಾಡಿರುವುದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದರು. ಸಭೆಯಲ್ಲಿ ನಡೆದಿರುವ ಚರ್ಚೆಯ ಆಡಿಯೊವನ್ನು ಬಿಡುಗಡೆ ಮಾಡಿದ ಬಿಜೆಪಿ ನಾಯಕರು ಸಭೆಯಲ್ಲಿ ನಿರ್ಣಯವಾಗದೇ ಇದ್ದರೂ ಈ ರೀತಿಯ ನಿರ್ಣಯ ಆಗಿದೆ ಎಂದು ಆಗಿನ ಮುಡಾ ಅಧ್ಯಕ್ಷ ಎಚ್‌.ವಿ.ರಾಜೀವ್‌ ಮತ್ತು ಆಯುಕ್ತ ನಟೇಶ್‌ ಅವರು ಹೇಳಿಕೆ ನೀಡಿದ್ದಾರೆ. ಸದರಿ ಅಧಿಕಾರಿ ನಟೇಶ್‌ ವರ್ಗಾವಣೆಯಾಗಿ ಎಂತಂತಹ ಜಾಗಗಳಿಗೆ ತಲುಪುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಮಾರ್ಮಿಕವಾಗಿ ಹೇಳಿದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ