ಬೆಂಗಳೂರು: ಮುಡಾ ಹಗರಣ ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ಚರ್ಚೆ ಬಗ್ಗೆ ಇದೀಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತೆರೆ ಎಳೆಯುವ ಯತ್ನ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ.

ಸಿಎಂ ಬದಲಾಗಬೇಕು ಎಂದು ಯಾರೂ ಸಹ ಬಯಸಿಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಸಿಎಂ ಬದಲಾವಣೆ ಬಗ್ಗೆ ನಾವು ಊಹೆ ಕೂಡ ಮಾಡಿಲ್ಲ. ಸಿಎಂ ಬದಲಾವಣೆ ಅಪ್ರಸ್ತುತ. ಅಂತಹ ಯಾವುದೇ ಚರ್ಚೆಗೂ ಆಸ್ಪದ ಇಲ್ಲ ಎಂದು ಹೇಳಿದರು.
ಇದೇ ವೇಳೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಪರಮೇಶ್ವರ್ ಅವರನ್ನು ಭೇಟಿಯಾಗಿರುವುದರಲ್ಲಿ ವಿಶೇಷತೆ ಏನೂ ಇಲ್ಲ. ಕಚೇರಿಗೆ ಹೋಗುತ್ತಾ ಇರುತ್ತೇವೆ. ಪಕ್ಷ ಸಂಘಟನೆ, ಚುನಾವಣೆ ಬಗ್ಗೆ ಚರ್ಚೆ ಮಾಡಿದ್ವಿ ಅಷ್ಟೇ ಎಂದು ತಿಳಿಸಿದರು.
Laxmi News 24×7