Breaking News
Home / Uncategorized / ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳ ಲೈಸೆನ್ಸ್ ರದ್ದು: ಎಂ.ಜಿ.ಹಿರೇಮಠ ಎಚ್ಚರಿಕೆ

ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳ ಲೈಸೆನ್ಸ್ ರದ್ದು: ಎಂ.ಜಿ.ಹಿರೇಮಠ ಎಚ್ಚರಿಕೆ

Spread the love

ಬೆಳಗಾವಿ: ದಂಡ ವಿಧಿಸಿದ ಬಳಿಕವೂ ನಿಯಮಾವಳಿ ಮೀರಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳ ಲೈಸೆನ್ಸ್ ರದ್ದು ಮಾಡುವುದರ ಜತೆಗೆ ಅಂಗಡಿಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಕೋಟ್ಪಾ ಕಾಯ್ದೆ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಣ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಿಕ್ಷಕರು ಸೇರಿದಂತೆ ಎಲ್ಲ ಸರ್ಕಾರಿ ನೌಕರರು ತಂಬಾಕು ಮಾರಾಟ ತಡೆಯಲು ಕೈಜೋಡಿಸಬೇಕು. ಕೋಟ್ಪಾ ಕಾಯ್ದೆಯಡಿ ಹೆಚ್ಚು ಹೆಚ್ಚು ಪ್ರಕರಣಗಳನ್ನು ದಾಖಲಿಸಿ, ದಂಡ ವಿಧಿಸಬೇಕು ಎಂದು ತಿಳಿಸಿದರು.

ಆರೋಗ್ಯ ಇಲಾಖೆ ನೇತೃತ್ವದಲ್ಲಿ ದಾಳಿ ನಡೆಸುವ ಸಂದರ್ಭದಲ್ಲಿ ಪೆÇಲೀಸ್ ಇಲಾಖೆ ಕೂಡ ಅಗತ್ಯ ನೆರವು ನೀಡಬೇಕು. ಸಿಗರೇಟು ಹಾಗೂ ಇತರೆ ತಂಬಾಕು ಉತ್ಪನ್ನಗಳ(ಕೋಟ್ಪಾ) ಕಾಯ್ದೆಯ ಸೆಕ್ಷನ್ 4 ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ.

ಸೆಕ್ಷನ್ 5 ರ ಪ್ರಕಾರ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಜಾಹೀರಾತುಗಳು ನಿಷೇಧಿತವಾಗಿದ್ದು, ಸೆಕ್ಷನ್ 6(ಎ) ಅನ್ವಯ ಅಪ್ರಾಪ್ತ ವಯಸ್ಕರಿಗೆ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧಿಸಿರುವುದರಿಂದ ಇದು ಕಡ್ಡಾಯವಾಗಿ ಜಾರಿಗೆ ತರಲು ಎಲ್ಲ ಇಲಾಖೆಯ ಅಧಿಕಾರಿಗಳು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ಸೂಚನೆ ನೀಡಿದರು.

ಮಹಾನಗರ ಪಾಲಿಕೆ ಆಯುಕ್ತ ಜಗದೀಶ್, ಅಪರಾಧ ಮತ್ತು ಸಂಚಾರ ವಿಭಾಗದ ಉಪ ಪೆÇಲೀಸ್ ಆಯುಕ್ತ ಚಂದ್ರಶೇಖರ್ ನೀಲಗಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪಸಂಖ್ಯಾತರನ್ನು ಮುಗಿಸುತ್ತಾರೆ: ಸಚಿವ ಜಮೀರ್ ಅಹ್ಮದ್‌

Spread the loveಇದು ದೇಶ ಬಚಾವ್ ಎಲೆಕ್ಷನ್. ಬಿಜೆಪಿ ಒಳಗೆ ಒಂದು ರೋಗ ಇದೆ, ಬಿಜೆಪಿ ಎಂದರೆ ಕ್ಯಾನ್ಸರ್ ಇದ್ದಂತೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ